ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇನ್ನೆರಡು ದಿನಗಳ ಕಾಲ ನಿಷೇಧಾಜ್ಞೆ ಮುಂದುವರಿಕೆ

31/07/2022
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜಾರಿಯಾಗಿರುವ ನೈಟ್ ಕರ್ಫ್ಯೂ ಇನ್ನೆರಡು ದಿನಗಳವರೆಗೆ ಮುಂದುವರಿಸಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ.
ಆಗಸ್ಟ್ 1ರವರೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಾತ್ರಿ 6ರಿಂದ ಮುಂಜಾನೆ 6ರವರೆಗೆ ನಿಷೇಧಾಜ್ಞೆ ಜಾರಿ ಮಾಡಲಾಗಿತ್ತು. ತುರ್ತು ಸೇವೆಗಳ ಹೊರತು ಪಡಿಸಿ ಇತರ ಎಲ್ಲ ಚಟುವಟಿಕೆಗಳಿಗೆ ನಿಷೇಧ ಹೇರಲಾಗಿತ್ತು.
ಇದೀಗ ಪೊಲೀಸ್ ಇಲಾಖೆಯ ಮನವಿಯ ಹಿನ್ನೆಲೆಯಲ್ಲಿ ಜಿಲ್ಲಾದ್ಯಂತ ನಿಷೇಧಾಜ್ಞೆಯನ್ನು ಇನ್ನೆರಡು ದಿನಗಳವರೆಗೆ ಮುಂದುವರಿಸಲಾಗಿದೆ ಎಂದ ದ.ಕ.ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka