ದೇವರಿಗೆ ದೀಪ ಹಚ್ಚುತ್ತಿದ್ದ ವೇಳೆ ಸೀರೆಗೆ ಬೆಂಕಿ ಹತ್ತಿಕೊಂಡು ಮಹಿಳೆ ಸಾವು

ಉಡುಪಿ: ಬೆಂಕಿ ಆಕಸ್ಮಿಕದಿಂದ ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮಣಿಪಾಲ ಆಸ್ಪತ್ರೆಯಲ್ಲಿ ಜು.31 ರಂದು ಬೆಳಗ್ಗೆ ಮೃತಪಟ್ಟಿರುವ ಘಟನೆ ನಡೆದಿದೆ.
ಮೃತರನ್ನು ಅಂಬಲಪಾಡಿ ಸಮೀಪದ ಪಂದುಬೆಟ್ಟು ನಿವಾಸಿ ರುಕ್ಮಿಣಿ(80) ಎಂದು ಗುರುತಿಸಲಾಗಿದೆ.
ಇವರು ಜು.28ರಂದು ಮಧ್ಯಾಹ್ನ ಮನೆಯ ದೇವರ ಕೋಣೆಯಲ್ಲಿ ದೀಪ ಹಚ್ಚಿ ಊದು ಬತ್ತಿಯನ್ನು ಬಗ್ಗಿ ತೆಗೆಯುವಾಗ ಅವರು ಉಟ್ಟಿದ್ದ ಸೀರೆಗೆ ದೀಪದ ಬೆಂಕಿ ತಗುಲಿತು.
ಇದರಿಂದ ಮೈಗೆ ಬೆಂಕಿ ಹತ್ತಿಕೊಂಡಿದ್ದು, ಕೂಡಲೇ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka