ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಇಂದು ಬರಬೇಡಿ: ಭಕ್ತರಿಗೆ ಪ್ರವೇಶವಿಲ್ಲ
ಸುಬ್ರಹ್ಮಣ್ಯ: ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ನೆರೆ ಬರುವ ಸ್ಥಿತಿ ನಿರ್ಮಾಣವಾಗಿದೆ.
ಹೀಗಾಗಿ ಮುಂದಿನ 2 ದಿನಗಳ ಕಾಲ ಹೊರ ಜಿಲ್ಲೆಗಳ ಭಕ್ತರು ದೇವಾಲಯಕ್ಕೆ ಭೇಟಿ ನೀಡದಂತೆ ದಕ್ಷಿಣ ಕನ್ನಡ ಜಿಲ್ಲಾಡಳಿತ ಮನವಿ ಮಾಡಿದೆ.
ಈಗಾಗಲೇ ಕುಮಾರಧಾರ ನದಿ ಉಕ್ಕಿ ಹರಿಯುತ್ತಿದೆ. ಅಲ್ಲದೇ ಆದಿ ಸುಬ್ರಹ್ಮಣ್ಯ ದೇವಾಲಯಕ್ಕೆ ನೀರು ನುಗ್ಗಿದ್ದು ನಾಗರ ಪಂಚಮಿಯ ಶುಭಾವಸರದಲ್ಲಿ ದೇವಾಲಯಕ್ಕೆ ಭಾರಿ ಸಂಖ್ಯೆಯಲ್ಲಿ ಭಕ್ತರು ಆಗಮಿಸುವ ಸಾಧ್ಯತೆ ಇರುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಇಂದು ಮತ್ತು ನಾಳೆ ಭೇಟಿ ನೀಡದಂತೆ ಜಿಲ್ಲಾಡಳಿತ ಮನವಿ ಮಾಡಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka