ಫಾಝಿಲ್ ಹತ್ಯೆ ಪ್ರಕರಣ: 6 ಮಂದಿ ಆರೋಪಿಗಳನ್ನು ಬಂಧಿಸಿದ ಪೊಲೀಸರು
ಮಂಗಳೂರು: ಸುರತ್ಕಲ್ ನಲ್ಲಿ ಜುಲೈ 28ರಂದು ಭೀಕರವಾಗಿ ಕೊಲೆಗೀಡಾದ ಫಾಝಿಲ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ 6 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಬಜ್ಪೆ ನಿವಾಸಿ ಸುಹಾಸ್ ಶೆಟ್ಟಿ, ಕುಳಾಯಿಯ ಮೋಹನ್ ಅಲಿಯಾಸ್ ನೇಪಾಲಿ ಮೋಹನ್, ಮೋಹನ್ ಸಿಂಗ್, ಗಿರಿಧರ್, ಸುರತ್ಕಲ್ ನ ಅಭಿಷೇಕ್ ಶ್ರೀನಿವಾಸ್, ದೀಕ್ಷಿತ್ ಎಂದು ಗುರುತಿಸಲಾಗಿದೆ.
ಈ ಎಲ್ಲಾ ಆರೋಪಿಗಳು ನೇರವಾಗಿ ಹತ್ಯಾ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ. ಇವರೆಲ್ಲರ ವಿರುದ್ಧ ಬೇರೆ ಬೇರೆ ಪೊಲೀಸ್ ಠಾಣೆಗಳಲ್ಲಿ ಕೇಸ್ ಗಳಿವೆ.
ಜುಲೈ 26ರಂದು ರಾತ್ರಿಯಿಂದಲೇ ಎಲ್ಲರೂ ಒಬ್ಬರಿಗೊಬ್ಬರು ಮಾತನಾಡಿಕೊಂಡು ಸುಮಾರು 7 ಮಂದಿಯನ್ನು ಗುರಿಯಾಗಿಸಿಕೊಂಡು ಹತ್ಯೆಗೆ ಮುಂದಾಗಿದ್ದರು. ಕೊನೆಗೆ ಜುಲೈ 28ರಂದು ಫಾಝಿಲ್ ಅವರನ್ನೇ ಗುರಿಯಾಗಿಸಿ ಹತ್ಯೆಗೆ ಸಂಚು ಹಾಕಿದ್ದರು. ಹತ್ಯೆಗೆ ನಿಖರ ಕಾರಣ ಮುಂದಿನ ತನಿಖೆಯಿಂದ ತಿಳಿದು ಬರಲಿದೆ.
ಹತ್ಯೆ ನಡೆಸಿದ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ಪೊಲೀಸರು ಇಂದು ಮುಂಜಾನೆ ಉದ್ಯಾವರ ಬಳಿ ಬಂಧಿಸಲಾಗಿದೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಪೊಲೀಸ್ ವಶಕ್ಕೆ ಪಡೆಯಲಾಗುತ್ತದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka