ಇನ್ನೆರಡು ದಿನ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿಷೇಧಾಜ್ಞೆ ಮುಂದುವರಿಕೆ
02/08/2022
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ಇನ್ನೂ 2 ದಿನಗಳ ಕಾಲ (ಆಗಸ್ಟ್ 3 ಮತ್ತು 4ರಂದು) ರಾತ್ರಿ ನಿರ್ಬಂಧವನ್ನು ವಿಸ್ತರಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಆಗಸ್ಟ್ 5ರ ಬೆಳಗ್ಗೆ 6 ರವರೆಗೆ ನಿರ್ಬಂಧ ಮುಂದುವರಿಯಲಿದೆ.
ಇತ್ತೀಚಿಗೆ ಬೆಳ್ಳಾರೆ ಮತ್ತು ಸುರತ್ಕಲ್‌ನಲ್ಲಿ ನಡೆದ ಕೊಲೆ ಕೃತ್ಯದ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಸಂಜೆ 6ರಿಂದ ಮುಂಜಾನೆ 6ರವರೆಗೆ ತುರ್ತು ಸೇವೆಯನ್ನು ಹೊರತುಪಡಿಸಿ ಇತರ ಚಟುವಟಿಕೆಗಳಿಗೆ ನಿರ್ಬಂಧ ಹೇರಲಾಗಿತ್ತು. ಆಗಸ್ಟ್ 6ರ ತನಕ ಜಿಲ್ಲೆಯಲ್ಲಿ ನಿಷೇಧಾಜ್ಞೆಯೂ ಜಾರಿಯಲ್ಲಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka