ಫಾಝಿಲ್ ಹತ್ಯೆ ಪ್ರಕರಣ: 6 ಆರೋಪಿಗಳು ಆಗಸ್ಟ್ 15ರವರೆಗೆ ಪೊಲೀಸ್ ಕಸ್ಟಡಿಗೆ
ಮಂಗಳೂರು: ನಗರದ ಸುರತ್ಕಲ್ ನಲ್ಲಿ ನಡೆದ ಮುಹಮ್ಮದ್ ಫಾಝಿಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿ ಆರೋಪಿಗಳಿಗೆ ಮಂಗಳೂರು ನ್ಯಾಯಾಲಯ ಆಗಸ್ಟ್ 15ರ ವರೆಗೆ ಪೊಲೀಸ್ ಕಸ್ಟಡಿ ವಿಧಿಸಿದೆ.
ಆರೋಪಿಗಳಾದ ಸುಹಾಸ್ ಶೆಟ್ಟಿ, ಮೋಹನ್ ಆಲಿಯಾಸ್ ಮೋಹನ್ ಸಿಂಗ್, ಗಿರಿಧರ್, ಅಭಿಷೇಕ್, ಶ್ರೀನಿವಾಸ್, ದೀಕ್ಷಿತ್ ರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು ಹೆಚ್ಚುವರಿ ಮಾಹಿತಿ ಕಲೆ ಹಾಕುವ ಸಲುವಾಗಿ ಎರಡು ವಾರಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಲು ಕೇಳಿಕೊಂಡಿದ್ದರು.
ಅದರಂತೆ ನ್ಯಾಯಾಲಯವು ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ. ಇನ್ನು ಇವರಿಗೆ ಕಾರು ಬಾಡಿಗೆಗೆ ನೀಡಿದ್ದ ಆರೋಪಿ ಅಜಿತ್ ಕ್ರಾಸ್ತಾನನ್ನು ಬಂಧಿಸಿದ್ದ ಪೊಲೀಸರು ಕೋರ್ಟ್ ಗೆ ಹಾಜರುಪಡಿಸಿ ಪೊಲೀಸ್ ಕಸ್ಟಡಿಗೆ ಪಡೆಯಲಾಗಿತ್ತು. ಮಂಗಳೂರು ಉತ್ತರ ಎಸಿಪಿ ಮಹೇಶ್ ಕುಮಾರ್ ಈ ಪ್ರಕರಣದ ತನಿಖಾಧಿಕಾರಿಯಾಗಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka