ದಕ್ಷಿಣ ಕನ್ನಡ: ದ್ವಿಚಕ್ರ ವಾಹನ ಹಿಂಬದಿ ಸವಾರರ ನಿರ್ಬಂಧ ವಾಪಾಸ್
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊಲೆ ಕೃತ್ಯ ಹಿನ್ನೆಲೆಯಲ್ಲಿ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ವಿಧಿಸಲಾಗಿರುವ ನಿಷೇಧಾಜ್ಞೆಯನ್ನು (ಸೆಕ್ಷನ್ 144) ಆಗಸ್ಟ್ 8ರ ಬೆಳಗ್ಗೆ 6 ಗಂಟೆಯವರೆಗೆ ವಿಸ್ತರಿಸಲಾಗಿದೆ.
ಸಾರ್ವಜನಿಕ ಹಿತದೃಷ್ಟಿಯಿಂದ ಸಂಜೆ 6 ಗಂಟೆಯಿಂದ ದ್ವಿಚಕ್ರ ವಾಹನದಲ್ಲಿ ಹಿಂಬದಿ ಸವಾರರ ನಿರ್ಬಂಧವನ್ನು ವಾಪಸ್ ಪಡೆಯಲಾಗಿದೆ ಎಂದು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಹಿತಕರ ಘಟನೆ ತಪ್ಪಿಸಲು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ತುರ್ತಾಗಿ ದ್ವಿಚಕ್ರ ವಾಹನದಲ್ಲಿ ಹಿಂಬದಿ ಸವಾರಿ ಮಾಡುವುದನ್ನು ನಿಷೇಧಿಸಲಾಗಿದೆ ಎಂದು ಎಡಿಜಿಪಿ ಅಲೋಕ್ ಕುಮಾರ್ ಹೇಳಿದ್ದರು.
ದ್ವಿಚಕ್ರ ವಾಹನಗಳಲ್ಲಿ ಹಿಂಬದಿ ಸವಾರರಾಗಿ ಬಂದು ಅಪರಾಧ ಕೃತ್ಯಗಳಲ್ಲಿ ತೊಡಗಿಸುತ್ತಿದ್ದಾರೆ ಎಂಬ ಮಾಹಿತಿ ಬಂದ ಹಿನ್ನೆಲೆಯಲ್ಲಿ ಪುರುಷ ವ್ಯಕ್ತಿಗಳು ಹಿಂಬದಿ ಸವಾರಿ ಮಾಡುವುದನ್ನು ನಿಷೇಧಿಸಲಾಗುವುದು. ಈ ನಿಯಮ ಆಗಸ್ಟ್ 5ರಿಂದಲೇ ಜಾರಿಗೆ ಬರಲಿದೆ ಎಂದು ಎಡಿಜಿಪಿ ಅಲೋಕ್ ಕುಮಾರ್ ಹೇಳಿದ್ದರು. ಇದೀಗ ಈ ಆದೇಶವನ್ನು ವಾಪಸ್ ಪಡೆದುಕೊಳ್ಳಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka