ನೇಣು ಬಿಗಿದು ಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕಿ
ಬೆಳ್ತಂಗಡಿ: ಮಾಜಿ ಶಿಕ್ಷಕಿಯೊಬ್ಬರು ತಮ್ಮ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದಲ್ಲಿ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ಮುಂಡ್ರುಪ್ಪಾಡಿ ನಿವಾಸಿಯಾಗಿರುವ ಚೈತ್ರಾ ಅಡಿಗ ಗುರುವಾರ ಮುಂಜಾನೆ ಮನೆಯ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಆತ್ಮಹತ್ಯೆಗೆ ಶರಣಾದ ಚೈತ್ರಾ ಅವರು ಪತಿ ದೀಪಕ್ ಹಾಗೂ ಒಂದು ಹೆಣ್ಣು ಮಗುವನ್ನು ಅಗಲಿದ್ದಾರೆ. ಚೈತ್ರಾ ಉಜಿರೆ ಖಾಸಗಿ ಶಾಲೆಯ ಮಾಜಿ ಶಿಕ್ಷಕಿಯಾಗಿದ್ದರು.
ಘಟನಾ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ ಸಾವಿಗೆ ಕಾರಣ ಏನೆಂದು ಇನ್ನೂ ತಿಳಿದುಬಂದಿಲ್ಲ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka