ವಿಪರೀತ ಕುಡಿತದ ಚಟ, ಪ್ರಾಣವನ್ನೇ ಬಲಿ ಪಡೆಯಿತು!
05/08/2022
ಕಾರ್ಕಳ: ವಿಪರೀತ ಮದ್ಯ ಸೇವನೆ ಚಟದಿಂದ ಅನಾರೋಗ್ಯಕ್ಕೆ ಒಳಗಾಗಿದ್ದ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಿಯಾರು ಗ್ರಾಮದ ಜೋಡುಕಟ್ಟೆ ಕಾರೋಲ್ ಗುಡ್ಡೆ ಎಂಬಲ್ಲಿ ಆ.5ರಂದು ಬೆಳಗ್ಗೆ ನಡೆದಿದೆ.
ಮೃತರನ್ನು ಸ್ಥಳೀಯ ನಿವಾಸಿ ದೊರೆಸ್ವಾಮಿ ಎಂಬವರ ಮಗ ಮಣಿಕಂಠ(41) ಎಂದು ಗುರುತಿಸಲಾಗಿದೆ.
ಇವರು ಜೀವನದಲ್ಲಿ ಜಿಗುಪ್ಸೆಗೊಂಡು ಮನೆ ಟೆರಾಸ್ ಮೇಲಿನ ಚಪ್ಪರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka