ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ತೋಡಿನಲ್ಲಿ ಪತ್ತೆ! - Mahanayaka

ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ತೋಡಿನಲ್ಲಿ ಪತ್ತೆ!

death in water
06/08/2022

ಕಾರ್ಕಳ: ತಾಲೂಕಿನ ಇರ್ವತ್ತೂರು ಗ್ರಾಮದ ತೋಡಿನಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿರುವ ಘಟನೆ ಇಂದು ಬೆಳಿಗ್ಗೆ ನಡೆದಿದೆ.

ಮೃತರನ್ನು ಇರ್ವತ್ತೂರು ನಿವಾಸಿ ಸುಕೇಶ್ ಎಂದು ಗುರುತಿಸಲಾಗಿದೆ. ಸುಕೇಶ್ ಅವರು ನಿನ್ನೆ ಸಂಜೆಯಿಂದ ನಾಪತ್ತೆಯಾಗಿದ್ದರು. ಹುಡುಕಾಟ ನಡೆಸಿದಾಗ ತೋಡಿನ ಬದಿಯಲ್ಲಿ ಚಪ್ಪಲಿ ಕಾಣಿಸಿಕೊಂಡಿತ್ತು. ಬಳಿಕ ತೋಡಿನಲ್ಲಿ ಶೋಧ ನಡೆಸಿದಾಗ 10ಮೀಟರ್ ದೂರದಲ್ಲಿ ಸುಕೇಶ್ ಮೃತದೇಹ ದೊರಕಿದೆ.

ಸುಕೇಶ್ ಅವರು ಆಕಸ್ಮಿಕವಾಗಿ ಬಿದ್ದು ಮೃತಪಟ್ಟಿದ್ದಾರೆಯೋ ಅಥವಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆಯೋ ಎಂಬುವುದು ಇನ್ನಷ್ಟೇ ತಿಳಿಯಬೇಕಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ