ನಡೆದುಕೊಂಡು ಹೋಗುತ್ತಿದ್ದ ವೇಳೆ ಕಾಲು ಜಾರಿ ಬಿದ್ದು ವ್ಯಕ್ತಿ ಸಾವು
06/08/2022
ಬ್ರಹ್ಮಾವರ : ನಡೆದುಕೊಂಡು ಹೋಗುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲುಜಾರಿ ಕೆರೆಗೆ ಬಿದ್ದು ನೀರಿನಲ್ಲಿ ಮುಳುಗಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಬ್ರಹ್ಮಾವರ ತಾಲೂಕಿನ ಹಂದಾಡಿ ಗ್ರಾಮದ ಮಕ್ಕಿಮನೆ ಎಂಬಲ್ಲಿ ಇಂದು ಬೆಳಕಿಗೆ ಬಂದಿದೆ.
ಮಕ್ಕಿಮನೆ ನಿವಾಸಿ ಬಾಬು ಪೂಜಾರಿ ಮೃತದುರ್ದೈವಿ. ಇವರು ಕೃಷಿ ಕೂಲಿ ಕೆಲಸ ಮಾಡಿಕೊಂಡಿದ್ದು, ಮಗಳ ಮನೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಕೆರೆ ನೀರಿಗೆ ಬಿದ್ದು ಮುಳುಗಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.. ಈ ಬಗ್ಗೆ ಬ್ರಹ್ಮಾವರ ಪೊಲೀಸ್‌ಠಾಣೆ ಪ್ರಕರಣ ದಾಖಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka