ಅನಾರೋಗ್ಯದಿಂದ ನೊಂದು ಪೊಲಿಯೋ ಪೀಡಿತ ವ್ಯಕ್ತಿ ಆತ್ಮಹತ್ಯೆಗೆ ಶರಣು - Mahanayaka

ಅನಾರೋಗ್ಯದಿಂದ ನೊಂದು ಪೊಲಿಯೋ ಪೀಡಿತ ವ್ಯಕ್ತಿ ಆತ್ಮಹತ್ಯೆಗೆ ಶರಣು

baindoor news
08/08/2022

ಬೈಂದೂರು: ಅನಾರೋಗ್ಯದಿಂದ ಬಳಲುತ್ತಿದ್ದ ವೃದ್ಧನೋರ್ವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೈಂದೂರು ತಾಲೂಕಿನ ಉಪ್ಪುಂದ ಗ್ರಾಮದಲ್ಲಿ ಇಂದು ಬೆಳಿಗ್ಗೆ ಬೆಳಕಿಗೆ ಬಂದಿದೆ.


Provided by

ಉಪ್ಪುಂದ ಗ್ರಾಮದ 71 ವರ್ಷದ ನಾರಾಯಣ ಪೂಜಾರಿ ಆತ್ಮಹತ್ಯೆಗೆ ಶರಣಾದ ವೃದ್ಧ. ಇವರು ಪೊಲೀಯೋ ಪೀಡಿತರಾಗಿದ್ದು, ಸುಮಾರು 2 ವರ್ಷದ ಹಿಂದೆ ಜಾರಿ ಬಿದ್ದ ಪರಿಣಾಮ ಬಲಕಾಲಿಗೆ ಆಪರೇಷನ್ ಆಗಿತ್ತು. ಆ ಬಳಿಕ ಸರಿಯಾಗಿ ನಡೆದಾಡಲು ಆಗುತ್ತಿರಲಿಲ್ಲ.

ಇದೇ ಕಾರಣದಿಂದ ಜೀವನದಲ್ಲಿ ಮಾನಸಿಕವಾಗಿ ನೊಂದು ಆ.6ರ ರಾತ್ರಿಯಿಂದ ಆ. 7ರಂದು ಬೆಳಿಗ್ಗೆ 7 ಗಂಟೆಯ ಮಧ್ಯಾವಧಿಯಲ್ಲಿ ಮನೆಯ ತೋಟದಲ್ಲಿರುವ  ಆವರಣವಿಲ್ಲದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Provided by

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ