ಕಾಮನ್‌ವೆಲ್ತ್ ಗೇಮ್ಸ್ ನಲ್ಲಿ ಪದಕ ವಿಜೇತ ಗುರುರಾಜ್ ಪೂಜಾರಿಗೆ ವೀರೇಂದ್ರ ಹೆಗ್ಗಡೆ ಅಭಿನಂದನೆ

ಬೆಳ್ತಂಗಡಿ: ಕಾಮನ್‌ವೆಲ್ತ್ ಗೇಮ್ಸ್ ನಲ್ಲಿ ಭಾರ ಎತ್ತುವ ಸ್ಪರ್ಧೆಯಲ್ಲಿ ಕಂಚಿನ ಪದಕ ವಿಜೇತ ಉಜಿರೆ ಎಸ್ ಡಿಎಂ ಕಾಲೇಜಿನ ಹಿರಿಯ ವಿದ್ಯಾರ್ಥಿ ಕುಂದಾಪುರದ ಗುರುರಾಜ್ ಪೂಜಾರಿ ಅವರನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಅಭಿನಂದಿಸಿ, ಗೌರವಿಸಿದರು.
ಕಾಮನ್ ವೆಲ್ತ್ ಗೇಮ್ಸ್ ನಿಂದ ತವರಿಗೆ ಬರುತ್ತಿದ್ದ ಗುರುರಾಜ್ ಪೂಜಾರಿ ಅವರನ್ನು ಧರ್ಮಾಧಿಕಾರಿ ಡಾ.ಹೆಗ್ಗಡೆಯವರು ದೆಹಲಿಯಿಂದ ಮಂಗಳೂರಿಗೆ ಬರುವ ಸಂದರ್ಭ ಮಂಗಳೂರು ಏರ್ ಪೋರ್ಟ್‌ನಲ್ಲಿ ಕ್ಷೇತ್ರದ ಪರವಾಗಿ ಅಭಿನಂದಿಸಿ, ಆಶೀರ್ವದಿಸಿದರು.
ಈ ಸಂದರ್ಭ ಮೂಡುಬಿದಿರೆ ಶಾಸಕ ಉಮಾನಾಥ ಕೋಟ್ಯಾನ್, ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ಎ.ವಿ.ಶೆಟ್ಟಿ ಮೊದಲಾದವರು ಇದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka