ಕುಡಿತ ಬದುಕು ಕೆಡಿಸಿತು: ಅನಾರೋಗ್ಯಕ್ಕೊಳಗಾದ ಇಬ್ಬರು ಸಾವು - Mahanayaka

ಕುಡಿತ ಬದುಕು ಕೆಡಿಸಿತು: ಅನಾರೋಗ್ಯಕ್ಕೊಳಗಾದ ಇಬ್ಬರು ಸಾವು

udupi news
09/08/2022

ಮಲಗಿದ ಸ್ಥಿತಿಯಲ್ಲೆ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಕುಂದಾಪುರ ತಾಲೂಕು ಬಸ್ರೂರು ಗ್ರಾಮದ ಆ.8ರಂದು ಮಧ್ಯಾಹ್ನ ನಡೆದಿದೆ.

ಮೃತರನ್ನು ಅಂಪಾರು ಗ್ರಾಮದ ನೆಲ್ಲಿಕಟ್ಟೆ ನಿವಾಸಿ 48 ವರ್ಷದ ಸುರೇಶ ಪೂಜಾರಿ ಎಂದು ಗುರುತಿಸಲಾಗಿದೆ. ಇವರು ವಿಪರೀತ ಶರಾಬು ಸೇವಿಸುವ ಚಟ ಹೊಂದಿದ್ದು, ಇದರಿಂದಾಗಿ ಅನಾರೋಗ್ಯಕ್ಕೀಡಾಗಿದ್ದರು.

ನಿನ್ನೆ ಮಧ್ಯಾಹ್ನ ಬಸ್ರೂರು ಗ್ರಾಮದ ಮಂಜುಶ್ರೀ ಫ್ಯಾಕ್ಟ್ರಿಗೆ ಹೋಗುವ ತಿರುವಿನ ಮಣ್ಣಿನ ರಸ್ತೆಯಲ್ಲಿ ಮಲಗಿದ ಸ್ಥಿತಿಯಲ್ಲಿ ಸುರೇಶ್ ಮೃತದೇಹ ಪತ್ತೆಯಾಗಿತ್ತು. ಈ ಬಗ್ಗೆ ಕುಂದಾಪುರ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪಾರ್ಕಿನ ಫ್ಲೈ ಓವರ್ ನ ಕೆಳಗೆ ವ್ಯಕ್ತಿಯೊಬ್ಬರ ಮೃತದೇಹ ಪತ್ತೆ

ಕುಂದಾಪುರ ತಾಲೂಕಿನ ಕಸಬ ಗ್ರಾಮದ ಶಾಸ್ತ್ರೀ ಪಾರ್ಕಿನ ಫ್ಲೈ ಓವರ್ ನ ಕೆಳಗೆ ಆ.8ರಂದು ವ್ಯಕ್ತಿಯೋರ್ವರ ಮೃತದೇಹ ಪತ್ತೆಯಾಗಿದೆ.

ಮೃತರನ್ನು ಮೂಲತಃ ಬೆಳಗಾವಿ ಜಿಲ್ಲೆಯ ರಾಮದುರ್ಗಾ ತಾಲೂಕಿನ 37ವರ್ಷದ ಬಸವರಾಜ ಎಂದು ಗುರುತಿಸಲಾಗಿದೆ. ಇವರು ಒಂದು ವರ್ಷದ ಹಿಂದೆ ಕೂಲಿ ಕೆಲಸಕ್ಕಾಗಿ ಕುಂದಾಪುರಕ್ಕೆ ಬಂದಿದ್ದರು. ವೀಪರೀತ ಮದ್ಯಪಾನ ಮಾಡುವ ಅಭ್ಯಾಸ ಹೊಂದಿದ್ದು, ಇದರಿಂದ ಅನಾರೋಗ್ಯಕ್ಕೆ ತುತ್ತಾಗಿ ಮೃತಪಟ್ಟಿರಬಹುದು ಎಂದು‌ ಶಂಕಿಸಲಾಗಿದೆ. ಈ ಬಗ್ಗೆ ಕುಂದಾಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ