ಗದ್ದೆಯಲ್ಲಿ ಕೃಷಿ ಮಾಡುತ್ತಿದ್ದ ವೇಳೆ ಹಠಾತ್ ಎದೆ ನೋವಿನಿಂದ ಕೃಷಿಕ ಮೃತ್ಯು
ಕಾರ್ಕಳ: ಗದ್ದೆಯಲ್ಲಿ ಕೃಷಿ ಮಾಡುವಾಗ ಎದೆನೋವು ಕಾಣಿಸಿಕೊಂಡು ಕೃಷಿಕನೋರ್ವ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಮರ್ಣೆ ಗ್ರಾಮದ ಕೈಕಂಬ ಎಂಬಲ್ಲಿ ಆ.9ರಂದು ಸಂಜೆ ನಡೆದಿದೆ.
ಮರ್ಣೆ ಗ್ರಾಮದ ಕೈಕಂಬ ನಿವಾಸಿ 56 ವರ್ಷದ ರಾಮಕೃಷ್ಣ ಹೆಗ್ಡೆ ಮೃತದುರ್ದೈವಿ. ಇವರು ನಿನ್ನೆ ಕಡ್ತಲದಲ್ಲಿ ತಮ್ಮ ಗದ್ದೆಯಲ್ಲಿ ಕೃಷಿ ಕೆಲಸ ಮಾಡುತ್ತಿದ್ದರು. ಈ ವೇಳೆ ಹಠಾತ್ ಆಗಿ ಎದೆನೋವು ಕಾಣಿಸಿಕೊಂಡಿದೆ.
ಕೂಡಲೇ ಅವರನ್ನು ಅಜೆಕಾರಿನ ಖಾಸಗಿ ಕ್ಲಿನಿಕ್‌ಗೆ ಕರೆದುಕೊಂಡು ಹೋಗಿದ್ದು, ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿ ಪರೀಕ್ಷಿಸಿದ ವೈದ್ಯರು ರಾಮಕೃಷ್ಣ ಹೆಗ್ಡೆಯವರು ಅದಾಗಲೇ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka