ರಸ್ತೆಯಲ್ಲಿ ತಲ್ವಾರ್ ಹಿಡಿದು ಓಡಾಡಿದ ಯುವಕನ ಬಂಧನ
10/08/2022
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಕನಕಮಜಲು ಗ್ರಾಮದ ಸುಣ್ಣಮೂಲೆ ಬಳಿ ತಲ್ವಾರ್ ಹಿಡಿದು ಓಡಾಡಿದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.
ಸಂದೀಪ್ ಎಂಬಾತ ತಲವಾರು ಹಿಡಿದುಕೊಂಡು ಓಡಾಡುತ್ತಿದ್ದ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಸಂದೀಪ್ ನನ್ನು ಸುಳ್ಯ ಪೊಲೀಸರು ಬಂಧಿಸಿ ಸುಮೊಟೋ ಪ್ರಕರಣ ದಾಖಲಿಸಿದ್ದಾರೆ.
ಸಂದೀಪ್ ವಿಪರೀತ ಮದ್ಯ ಸೇವನೆಯ ಚಟ ಹೊಂದಿದ್ದು, ಮಾನಸಿಕ ಸ್ಥಿರತೆ ಕಳೆದುಕೊಂಡು ಈ ರೀತಿ ವರ್ತಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯ ಗಂಭೀರತೆ ಅರಿತ ಪೊಲೀಸರು ಸ್ಥಳಕ್ಕೆ ತೆರಳಿ ತಲವಾರು ವಶಪಡಿಸಿಕೊಂಡಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka