ಫಾಝಿಲ್ ಕುಟುಂಬಕ್ಕೆ 30 ಲಕ್ಷ ಪರಿಹಾರ ವಿತರಿಸಿದ ಮುಸ್ಲಿಂ ಸೆಂಟ್ರಲ್ ಕಮಿಟಿ
11/08/2022
ಮಂಗಳೂರು: ನಗರದ ಸುರತ್ಕಲ್ ನಲ್ಲಿ ಹತ್ಯೆಯಾದ ಪಾಝಿಲ್ ಕುಟುಂಬಕ್ಕೆ ಮುಸ್ಲಿಂ ಸೆಂಟ್ರಲ್ ಕಮಿಟಿಯಿಂದ 30 ಲಕ್ಷ ರೂಪಾಯಿ ಪರಿಹಾರದ ಚೆಕ್ ನ್ನು ಅವರ ನಿವಾಸದಲ್ಲಿಂದು ವಿತರಿಸಲಾಯಿತು.
ಮುಸ್ಲಿಂ ಸೆಂಟ್ರಲ್ ಕಮಿಟಿ ಅಧ್ಯಕ್ಷ ಹಾಜಿ ಕೆ.ಎಸ್. ಮಹಮ್ಮದ್ ಮಸೂದ್ ನೇತೃತ್ವದಲ್ಲಿ ಹತ್ಯೆಗೀಡಾದ ಫಾಝಿಲ್ ಕುಟುಂಬಕ್ಕೆ 30 ಲಕ್ಷ ರೂಪಾಯಿಯ ಚೆಕ್ ವಿತರಿಸಲಾಯಿತು.
ಇದೇ ವೇಳೆ ಅಧ್ಯಕ್ಷ ಮಸೂದ್ ಅವರು, ಕುಟುಂಬದ ಹಿನ್ನೆಲೆಯ ಮಾಹಿತಿಯನ್ನು ಪಡೆದರು. ಇದೇ ವೇಳೆ ನಿಯೋಗದಲ್ಲಿ ಮುಸ್ಲಿಂ ಸೆಂಟ್ರಲ್ ಕಮಿಟಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka