ಆಗಸ್ಟ್ 18ರಂದು ಹೊಸ ತುಳು ಸಿನೆಮಾ ‘ಅಬತರ’ ತೆರೆಗೆ
ಹೊಸ ತುಳು ಸಿನೆಮಾ ‘ಅಬತರ’ ಆಗಸ್ಟ್ 18ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆಕಾಣಲಿದೆ ಎಂದು ನಿರ್ದೇಶಕ, ನಟ ಅರ್ಜುನ್ ಕಾಪಿಕಾಡ್ ತಿಳಿಸಿದ್ದಾರೆ.
ಮಂಗಳೂರು ನಗರದ ಉರ್ವದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಸಿನೆಮಾ ಮಂಗಳೂರಿನಲ್ಲಿ ರೂಪವಾಣಿ, ಭಾರತ್ ಮಾಲ್, ಸಿನಿಪಾಲಿಸ್, ಪಿವಿಆರ್, ಮೂಡುಬಿದಿರೆಯಲ್ಲಿ ಅಮರಶ್ರೀ, ಬೆಳ್ತಂಗಡಿಯಲ್ಲಿ ಭಾರತ್, ಸುರತ್ಕಲ್ ನಲ್ಲಿ ನಟರಾಜ್, ಸಿನಿಗ್ಯಾಲಕ್ಸಿ, ಉಡುಪಿಯಲ್ಲಿ ಕಲ್ಪನಾ, ಮಣಿಪಾಲದಲ್ಲಿ ಭಾರತ್ ಸಿನಿಮಾಸ್, ಐನಾಕ್ಸ್, ಕಾರ್ಕಳದಲ್ಲಿ ರಾಧಿಕಾ, ಪ್ಲಾನೆಟ್, ಪುತ್ತೂರಿನಲ್ಲಿ ಅರುಣಾ, ಸುಳ್ಯದಲ್ಲಿ ಸಂತೋಷ್ ಚಿತ್ರಮಂದಿರಗಳಲ್ಲಿ ತೆರೆ ಕಾಣಲಿದೆ. ತದನಂತರ ಮುಂಬೈ, ಬೆಂಗಳೂರು, ಕಾಸರಗೋಡು, ಮುಳ್ಳೇರಿಯ, ಸಕಲೇಶಪುರ, ಶುಂಠಿಕೊಪ್ಪ, ತೀರ್ಥಹಳ್ಳಿ, ಕುಂದಾಪುರ, ಶಿವಮೊಗ್ಗ ಮೊದಲಾದ ಕಡೆಗಳಲ್ಲಿ ಸಿನೆಮಾ ಬಿಡುಗಡೆಗೊಳ್ಳಲಿದೆ.
ಆಗಸ್ಟ್ 16 ಮತ್ತು 17ರಂದು ಮಂಗಳೂರು, ಮೂಡುಬಿದಿರೆ, ಪುತ್ತೂರು, ಉಡುಪಿ, ಪಡುಬಿದ್ರೆ, ಕಿನ್ನಿಗೋಳಿ, ಗುರುಪುರ, ಕುಲಶೇಖರ ಮೊದಲಾದ ಅನಾಥಶ್ರಮದಲ್ಲಿರುವ ಮಕ್ಕಳಿಗೆ ಸಿನೆಮಾವನ್ನು ಉಚಿತವಾಗಿ ಪ್ರದರ್ಶಿಸಲಾಗುವುದು. ಅಬತರ ಹಾಸ್ಯ ಸಿನಿಮಾದ ಕತೆಯನ್ನು ದೇವದಾಸ್ ಕಾಪಿಕಾಡ್ ರಚಿಸಿ, ಅಭಿನಯಿಸಿದ್ದಾರೆ. ತುಳುನಾಡ ಆ್ಯಕ್ಷನ್ ಕಿಂಗ್ ‘ಅರ್ಜುನ್ ಕಾಪಿಕಾಡ್’ ಅಭಿನಯದ ಜೊತೆಗೆ ಮೊಟ್ಟ ಮೊದಲ ಬಾರಿಗೆ ನಿರ್ದೇಶನ ಮಾಡಿದ್ದಾರೆ.
ತಾರಾಗಣದಲ್ಲಿ ನವೀನ್ ಡಿ.ಪಡೀಲ್, ಅರವಿಂದ ಬೋಳಾರ್, ಭೋಜರಾಜ್ ವಾಮಂಜೂರ್, ಸಾಯಿ ಕೃಷ್ಣ, ಸನಿಲ್ ಗುರು, ಚೇತನ್ ರೈ ಮಾಣಿ , ಲಕ್ಷ್ಮೀಶ್, ಸುನೀಲ್ ಚಿತ್ರಾಪುರ ಮತ್ತು ನಾಯಕನಟಿಯಾಗಿ ಗಾನ ಭಟ್, ಕ್ರಿಸ್ಟಿನಾ ನಟಿಸಿದ್ದಾರೆ. ಛಾಯಾಗ್ರಾಹಕರಾಗಿ ವಿಷ್ಣು ಪ್ರಸಾದ್, ಜೇಕಬ್, ಕಾರ್ಯಕಾರಿ ನಿರ್ಮಾಪಕರಾಗಿ ಸಂದೀಪ್ ಶೆಟ್ಟಿ ಕೆಲಸ ಮಾಡಿದ್ದಾರೆ. ನಿಖಿಲ್ ಸಾಲ್ಯಾನ್ ನಿರ್ಮಾಪಕರಾಗಿದ್ದು, ವೀರಾಜ್ ಅತ್ತಾವರ ಸಹ ನಿರ್ಮಾಪಕರಾಗಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka