ತಿರುಗಾಡಲು ಬಂದ ವಿದ್ಯಾರ್ಥಿ—ವಿದ್ಯಾರ್ಥಿನಿಗೆ ಚೂರಿ ಇರಿತ
ಮಡಿಕೇರಿ: ಒಂದೇ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳಿಗೆ ವ್ಯಕ್ತಿಯೋರ್ವ ಚಾಕುವಿನಿಂದ ಇರಿದು ಗಾಯಗೊಳಿಸಿದ ಘಟನೆ ಕುಶಾಲನಗರದ ಕಾವೇರಿ ನಿಸರ್ಗಧಾಮದಲ್ಲಿ ನಡೆದಿದೆ.
ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿ ಇದ್ದುದ್ದನ್ನು ಗಮನಿಸಿದ ಆರೋಪಿ ಚಾಕುವಿನಿಂದ ಇರಿದಿದ್ದಾನೆ ಎನ್ನಲಾಗಿದ್ದು, ವಿದ್ಯಾರ್ಥಿಗೆ ಇರಿಯುವಾಗ ಅಡ್ಡ ಬಂದ ವಿದ್ಯಾರ್ಥಿನಿಗೂ ಆರೋಪಿ ಇರಿದಿದ್ದಾನೆ ಎಂದು ಹೇಳಲಾಗಿದೆ.
ಆರೋಪಿಯನ್ನು ಸ್ಥಳೀಯರ ಸಹಕಾರದೊಂದಿಗೆ ತಕ್ಷಣವೇ ಪೊಲೀಸರು ಬಂಧಿಸಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ಆರೋಪಿ ಹೊಟೇಲ್ ಸಪ್ಲಯರ್ ಆಗಿದ್ದಾನೆನ್ನಲಾಗಿದೆ. ಮೇಲ್ನೋಟಕ್ಕೆ ಇದೊಂದು ಪ್ರೇಮ ಪ್ರಕರಣ ಎಂದು ಹೇಳಲಾಗಿದ್ದು, ವಿದ್ಯಾರ್ಥಿ ವಿದ್ಯಾರ್ಥಿನಿಯ ಜೊತೆಗೆ ಇದ್ದುದನ್ನು ಗಮನಿಸಿ ಆರೋಪಿ ಈಕೃತ್ಯ ಎಸಗಿದ್ದಾನೆ ಎಂದು ವರದಿಯಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka