ದೇಶಕ್ಕಾಗಿ ತ್ಯಾಗ ಮಾಡಿದ ಮಹಾತ್ಮರನ್ನು ನೆನಪಿಸಿಕೊಂಡ ಪ್ರಧಾನಿ ಮೋದಿ
75ನೇ ಸ್ವಾತಂತ್ರ್ಯೋತ್ಸವದ ಶುಭ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರು ದೇಶಕ್ಕಾಗಿ ತ್ಯಾಗ ಮಾಡಿದ ಹೋರಾಟಗಾರರನ್ನು ನೆನಪಿಸಿಕೊಂಡಿದ್ದಾರೆ.
ಮಂಗಲ್ ಪಾಂಡೆ, ತಾತ್ಯಾ ಟೋಪೆ, ಭಗತ್ ಸಿಂಗ್, ಸುಖದೇವ್, ರಾಜಗುರು, ಚಂದ್ರಶೇಖರ್ ಆಜಾದ್, ಅಶ್ಫಾಕುಲ್ಲಾ ಖಾನ್, ರಾಮ್ ಪ್ರಸಾದ್ ಬಿಸ್ಮಿಲ್ ಮತ್ತು ಬ್ರಿಟಿಷರ ಆಳ್ವಿಕೆಯ ಬುನಾದಿಯನ್ನೇ ಬುಡಮೇಲು ಮಾಡಿದ ಅಸಂಖ್ಯಾತ ಕ್ರಾಂತಿಕಾರಿಗಳಿಗೆ ದೇಶ ಕೃತಜ್ಞತೆ ಸಲ್ಲಿಸುತ್ತಿದೆ ಎಂದರು.
ದೇಶಕ್ಕಾಗಿ ಜೀವವನ್ನೇ ಮುಡಿಪಾಗಿಟ್ಟ ಬಾಪು, ನೇತಾಜಿ ಸುಭಾಷ್ ಚಂದ್ರ ಬೋಸ್, ಬಾಬಾಸಾಹೇಬ್ ಅಂಬೇಡ್ಕರ್, ವೀರ ಸಾವರ್ಕರ್ ಅವರಿಗೆ ದೇಶದ ಜನತೆ ಕೃತಜ್ಞತೆ ಸಲ್ಲಿಸಿದ್ದಾರೆ ಎಂದು ಪ್ರಧಾನಿ ಹೇಳಿದರು.
ಝಾನ್ಸಿ ರಾಣಿ ಲಕ್ಷ್ಮೀಬಾಯಿ, ಝಲ್ಕರಿ ಬಾಯಿ, ರಾಣಿ ಚೆನ್ನಮ್ಮ, ಬೇಗಂ ಹಜರತ್ ಮಹಲ್ ಮುಂತಾದ ಭಾರತದ ಮಹಿಳೆಯರ ಶಕ್ತಿ, ಬಲಿದಾನವನ್ನು ಮೋದಿ ನೆನಪಿಸಿಕೊಂಡರು.
ಸ್ವಾತಂತ್ರ್ಯಕ್ಕಾಗಿ ಹೋರಾಡಿದವರು ಅಥವಾ ದೇಶವನ್ನು ಕಟ್ಟಿದವರಾದ ಡಾ.ರಾಜೇಂದ್ರ ಪ್ರಸಾದ್, ನೆಹರೂ, ಸರ್ದಾರ್ ಪಟೇಲ್, ಎಸ್ಪಿ ಮುಖರ್ಜಿ, ಎಲ್ಬಿ ಶಾಸ್ತ್ರಿ, ದೀನದಯಾಳ್ ಉಪಾಧ್ಯಾಯ, ಜೆಪಿ ನಾರಾಯಣ್, ಆರ್.ಎಂ.ಲೋಹಿಯಾ, ವಿನೋಬಾ ಭಾವೆ, ನಾನಾಜಿ ದೇಶಮುಖ್, ಸುಬ್ರಮಣ್ಯ ಭಾರತಿ ಅವರಂತಹ ಮಹಾನ್ ವ್ಯಕ್ತಿಗಳ ಮುಂದೆ ತಲೆಬಾಗಬೇಕಾದ ದಿನವಿದು ಎಂದು ಮೋದಿ ಹೇಳಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka