ಸಾವರ್ಕರ್ ಫ್ಲೆಕ್ಸ್ ವಿವಾದ: ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಯುವ ಮೋರ್ಚ - Mahanayaka
1:30 AM Wednesday 5 - February 2025

ಸಾವರ್ಕರ್ ಫ್ಲೆಕ್ಸ್ ವಿವಾದ: ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಯುವ ಮೋರ್ಚ

udupi protest
17/08/2022

ಬ್ರಹ್ಮಗಿರಿ ಸರ್ಕಲ್ ನಲ್ಲಿ ಅಳವಡಿಸಿರುವ ಸಾವರ್ಕರ್ ಫ್ಲೆಕ್ಸ್ ಗೆ ಕಾಂಗ್ರೆಸ್ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಬಿಜೆಪಿ ಯುವ ಮೋರ್ಚದಿಂದ ಇಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು.

ಸರ್ಕಲ್  ಸರ್ಕಲ್ ನಲ್ಲಿ ಅಳವಡಿಸಿರುವ ಸಾವರ್ಕರ್ ಭಾವಚಿತ್ರಕ್ಕೆ ಮಾಲಾರ್ಪಣೆಗೈದ ಬಿಜೆಪಿ ಯುವ ಮೋರ್ಚ ಕಾರ್ಯಕರ್ತರು ಬಳಿಕ ಅಲ್ಲೇ ಸಮೀಪ ಇರುವ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ತೆರಳಿದರು.

ಮೆರೆವಣಿಗೆಯಲ್ಲಿ ಘೋಷಣೆ ಕೂಗುತ್ತಾ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಕಾರ್ಯಕರ್ತರನ್ನು ಪೊಲೀಸರು ತಡೆದು ವಾಪಸ್ ಕಳಿಸಿದರು ಇದರಿಂದ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ