ಸ್ವಾತಂತ್ರ್ಯೋತ್ಸವದ ಫ್ಲೆಕ್ಸ್ ನಲ್ಲಿ ಗೋಡ್ಸೆ ಫೋಟೋ!
ಮಧುಗಿರಿ: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಮಧುಗಿರಿ ಪಟ್ಟಣದ ದಂಡಿನ ಮಾರಮ್ಮ ದೇವಸ್ಥಾನದ ಬಳಿ ಅಳವಡಿಸಿದ್ದ ಫ್ಲೆಕ್ಸ್ ನಲ್ಲಿ ಮಹಾತ್ಮ ಗಾಂಧೀಜಿಯ ಹಂತಕ ನಾಥೂರಾಮ್ ಗೋಡ್ಸೆಯ ಚಿತ್ರ ಹಾಕಿರುವುದು ವಿವಾದಕ್ಕೆ ಕಾರಣವಾಗಿದೆ.
ಈ ಫೋಟೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಭಗತ್‌ಸಿಂಗ್ ಯೂಥ್ ಅಸೋಸಿಯೇಷನ್ ನ ಡಿ.ಎಂ.ಬಡಾವಣೆ ಎಂಬ ಹೆಸರನ್ನು ಬಳಸಿಕೊಂಡು ಫ್ಲೆಕ್ಸ್ ಅಳವಡಿಸಲಾಗಿದೆ.
ಇನ್ನೂ ಈ ಫೋಟೋ ವೈರಲ್ ಆಗುತ್ತಿದ್ದಂತೆಯೇ ಅಧಿಕಾರಿಗಳು ಸ್ಪಷ್ಟನೆ ನೀಡಿದ್ದು, ಫ್ಲೆಕ್ಸ್ ನಲ್ಲಿ ಇರುವ ಹೆಸರಿನ ಸಂಘಟನೆ ಯಾವುದೂ ಈ ಭಾಗದಲ್ಲಿ ಇಲ್ಲ. ಯಾರೋ ಕಿಡಿಗೇಡಿಗಳು ಈ ರೀತಿ ಮಾಡಿರಬಹುದು ಎಂದು ಸ್ಪಷ್ಟಪಡಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka