ಲೇಡಿಹಿಲ್ ಆರೋಗ್ಯ ಕೇಂದ್ರದಲ್ಲಿ ಮೂಲಭೂತ ವ್ಯವಸ್ಥೆ ಕಲ್ಪಿಸಲು ಒತ್ತಾಯ
ಮಂಗಳೂರು ನಗರದ ಲೇಡಿಹಿಲ್ ನ ಸರಕಾರಿ ನಗರ ಆರೋಗ್ಯ ಕೇಂದ್ರದಲ್ಲಿ ಅಗತ್ಯ ಜೌಷಧಿ, ನುರಿತ ವೈದ್ಯರು ಸಹಿತ ಎಲ್ಲಾ ಮೂಲಭೂತ ಸೌಕರ್ಯಗಳ ಕೊರತೆಗಳನ್ನು ಸರಿಪಡಿಸಲು ಕೂಡಲೇ ಕ್ರಮಕೈಗೊಳ್ಳಬೇಕು. ಹಾಗೂ ಈ ಆರೋಗ್ಯ ಕೇಂದ್ರವನ್ನು ಸುಸಜ್ಜಿತ ಕಟ್ಟಡ ಸಹಿತ ಮೇಲ್ದರ್ಜೆಗೇರಿಸಬೇಕೆಂದು ಒತ್ತಾಯಿಸಿ ಸಿಪಿಐಎಂ ಮಂಗಳೂರು ನಗರ ದಕ್ಷಿಣ ಸಮಿತಿಯಿಂದ ಮಂಗಳೂರು ಮಹಾನಗರ ಪಾಲಿಕೆ ಮೇಯರ್ ಹಾಗೂ ಆಯುಕ್ತರಿಗೆ ಇಂದು ಮನವಿಯನ್ನು ಸಲ್ಲಿಸಲಾಯಿತು.
ಈ ನಿಯೋಗದಲ್ಲಿ ಸಿಪಿಐಎಂ ನ ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಸುನೀಲ್ ಕುಮಾರ್ ಬಜಾಲ್, ನಗರ ಕಾರ್ಯದರ್ಶಿ ಸಂತೋಷ್ ಬಜಾಲ್, ಸಿಪಿಐಎಂ ಮುಖಂಡರಾದ ನಾಗೇಶ್ ಕೋಟ್ಯಾನ್, ರಘುವೀರ್ ಉರ್ವಸ್ಟೋರ್, ರೇವಂತ್ ಕದ್ರಿ, ಶಾಹಿದ್ ಮುಂತಾದವರು ಉಪಸ್ಥಿತರಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka