ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ: ವ್ಯಕ್ತಿಯ ಸ್ಥಿತಿ ಗಂಭೀರ
ಉಡುಪಿ: ಕಾರೊಂದು ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಉಡುಪಿ ಎಂ.ಜಿ.ಎಂ ಕೆನರಾ ಬ್ಯಾಂಕ್ ಎ.ಟಿ.ಎಂ ಬಳಿ ನಡೆದಿದೆ.
ಕುಂಜಿಬೆಟ್ಟು ನಿವಾಸಿ 62 ವರ್ಷದ ನಾರಾಯಣ ದೇವಾಡಿಗ ಗಾಯಗೊಂಡ ವ್ಯಕ್ತಿ. ಇವರು ಎಂ.ಜಿ.ಎಂ ಕೆ.ಇ.ಬಿ ವಸತಿ ಗೃಹದ ಬಳಿ ಗೂಡಂಗಡಿ ನಡೆಸುತ್ತಿದ್ದು, ರಾತ್ರಿ ಗೂಡಂಗಡಿ ಬಂದ್ ಮಾಡಿ ಎದುರುಗಡೆ ಇರುವ ಹೋಟೆಲಿಗೆ ಹೋಗಿ ವಾಪಾಸು ಮನೆಗೆ ಬರಲು ಎ.ಟಿ.ಎಂ ಬಳಿ ರಸ್ತೆ ದಾಟಲು ನಿಂತಿದ್ದರು.
ಈ ವೇಳೆ ಮಣಿಪಾಲ ಕಡೆಯಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಕಾರು ಚಾಲಕನು ದುಡುಕುತನ ಮತ್ತು ನಿರ್ಲಕ್ಷ್ಯತನದಿಂದ ಕಾರು ಚಲಾಯಿಸಿಕೊಂಡು ಬಂದು ರಸ್ತೆ ದಾಟಲು ನಿಂತುಕೊಂಡಿದ್ದ ನಾರಾಯಣ ದೇವಾಡಿಗ ಅವರಿಗೆ ಡಿಕ್ಕಿ ಹೊಡೆದಿದ್ದಾನೆ.
ಇದರಿಂದ ರಸ್ತೆಗೆ ಬಿದ್ದ ಅವರು ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಮಣಿಪಾಲ ಕೆ.ಎಂ.ಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka