ಬ್ರಹ್ಮಗಿರಿ ಸರ್ಕಲ್ ನಲ್ಲಿ ಹಾಕಲಾಗಿದ್ದ ಸಾವರ್ಕರ್ ಭಾವಚಿತ್ರ ತೆರವು

ಉಡುಪಿ ನಗರದ ಬ್ರಹ್ಮಗಿರಿ ಸರ್ಕಲ್ ನಲ್ಲಿ ಹಾಕಲಾಗಿದ್ದ ಸಾವರ್ಕರ್ ಭಾವಚಿತ್ರವಿರುವ ಕಟೌಟ್ ಅನ್ನು ತೆರವುಗೊಳಿಸಲಾಗಿದೆ.
ಸಾಕಷ್ಟು ವಿವಾದಕ್ಕೆ ಕಾರಣವಾಗಿದ್ದ ಈ ಕಟೌಟನ್ನು ಆಗಸ್ಟ್ ಹದಿನೈದರಂದು ಸ್ವಾತಂತ್ರ್ಯೋತ್ಸವಕ್ಕೆ ಶುಭ ಕೋರಲು ಹಾಕಲಾಗಿತ್ತು . ಇದಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಎಸ್ ಡಿಪಿಐ ಮುಖಂಡರು ಆಕ್ಷೇಪ ವ್ಯಕ್ತಪಡಿಸಿದರು.
ಈ ಹಿನ್ನೆಲೆಯಲ್ಲಿ ಬಿಜೆಪಿ ಮುಖಂಡರು ಹಾಗೂ ಜಿಲ್ಲಾ ಯುವ ಮೋರ್ಚಾ ಕಾರ್ಯಕರ್ತರು ಈ ಕಟೌಟ್ ಗೆ ಮಾಲಾರ್ಪಣೆ ಮಾಡಿ ಕಾಂಗ್ರೆಸ್ ಹಾಗೂ ಎಸ್ ಡಿಪಿಐ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು ಅಲ್ಲದೆ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಯತ್ನ ಕೂಡ ನಡೆಸಲಾಗಿತ್ತು.
ಈ ಹಿನ್ನೆಲೆಯಲ್ಲಿ ಕಳೆದ ನಾಲ್ಕೈದು ದಿನಗಳಿಂದ ಬ್ರಹ್ಮಗಿರಿ ಸರ್ಕಲ್ ನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.
ಅಷ್ಟಮಿ ನಡೆಯುತ್ತಿರುವುದರಿಂದ ಭದ್ರತೆಯ ಕಾರಣಕ್ಕಾಗಿ ಪೊಲೀಸರ ಸೂಚನೆಯಂತೆ ಸಂಘಪರಿವಾರದ ಕಾರ್ಯಕರ್ತರು ಈ ಕಟೌಟನ್ನು ತೆರವುಗೊಳಿಸಿದರು. ತೆರವುಗೊಳಿಸಿದ ಕಟೌಟನ್ನು ಬ್ರಹ್ಮಗಿರಿಯಿಂದ ಹುತಾತ್ಮ ಸ್ಮಾರಕದವರೆಗೆ ಮೆರವಣಿಗೆಯಲ್ಲಿ ಕೊಂಡೊಯ್ಯಲಾಯಿತು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka