‘ಜೊತೆ ಜೊತೆಯಲಿ’ ಆರ್ಯವರ್ಧನ್ ಪಾತ್ರ ನಿರ್ವಹಿಸುತ್ತಾರಾ ವಿಜಯ ರಾಘವೇಂದ್ರ?
ಜೊತೆ ಜೊತೆಯಲಿ ಧಾರಾವಾಹಿಯಿಂದ ಅನಿರುದ್ಧ್ ಔಟ್ ಆಗುತ್ತಿದ್ದಂತೆಯೇ ಇದೀಗ ಆರ್ಯವರ್ಧನ್ ಪಾತ್ರಕ್ಕೆ ನಟರ ಹುಡುಕಾಟ ಆರಂಭವಾಗಿದೆ. ನಟರ ಪಟ್ಟಿಯಲ್ಲಿ ಮೂರು ಹೆಸರು ಪ್ರಮುಖವಾಗಿ ಕೇಳಿ ಬಂದಿದೆ.
ಖ್ಯಾತ ನಟ ವಿಜಯ ರಾಘವೇಂದ್ರ ಅವರು ಈ ಪಾತ್ರಕ್ಕೆ ಸೂಕ್ತವಾಗುತ್ತಾರೆ ಎಂದು ಸಾಕಷ್ಟು ಜನರು ಅಭಿಪ್ರಾಯಪಟ್ಟಿದ್ದಾರೆ. ಜೊತೆಗೆ ಝೀ ಕನ್ನಡದ ಜೊತೆಗೆ ವಿಜಯ ರಾಘವೇಂದ್ರ ಅವರಿಗೆ ಉತ್ತಮ ಬಾಂಧವ್ಯವೂ ಇದೆ. ಹೀಗಾಗಿ ಅವರು ಈ ಪಾತ್ರವನ್ನು ಅವರು ಮುಂದುವರಿಸಬಹುದು ಎನ್ನುವ ಮಾತುಗಳು ಕೂಡ ಕೇಳಿ ಬಂದಿದೆ.
ವಿಜಯರಾಘವೇಂದ್ರ ಅವರು ಈ ಪಾತ್ರವನ್ನು ಒಪ್ಪಿಕೊಳ್ಳದಿದ್ದರೆ, ಹರೀಶ್ ರಾಜ್ ಹಾಗೂ ನವೀಣ್ ಕೃಷ್ಣ ಅವರು ಈ ಪಾತ್ರ ನಿರ್ವಹಿಸುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. ಆದರೆ ಧಾರಾವಾಹಿ ತಂಡ ಯಾರನ್ನು ಫೈನಲ್ ಮಾಡುತ್ತದೆ ಎನ್ನುವುದನ್ನು ಕಾದು ನೋಡಬೇಕಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka