ಸಿದ್ದರಾಮಯ್ಯ ಮಾಂಸಾಹಾರ ಸೇವಿಸಿ ದೇವಸ್ಥಾನಕ್ಕೆ ಹೋಗಿದ್ದು ತಪ್ಪಲ್ಲ: ಪ್ರಮೋದ್ ಮುತಾಲಿಕ್
ಹುಬ್ಬಳ್ಳಿ: ವಿಪಕ್ಷ ನಾಯಕ ಸಿದ್ದರಾಮಯ್ಯನವರು ಮಾಂಸಾಹಾರ ಸೇವಿಸಿ ದೇವಸ್ಥಾನಕ್ಕೆ ಹೋಗಿದ್ದು ತಪ್ಪಲ್ಲ ಎಂದು ಶ್ರೀರಾಮಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿಕೆ ನೀಡಿದ್ದಾರೆ.
ಸಿದ್ದರಾಮಯ್ಯ ಮಾಂಸಾಹಾರ ಸೇವಿಸಿ ದೇವಸ್ಥಾನ ಪ್ರವೇಶ ಮಾಡಿದ್ದಾರೆಂಬ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಬಿಜೆಪಿಯನ್ನು ತರಾಟೆಗೆತ್ತಿಕೊಂಡಿದ್ದು, ಬಿಜೆಪಿಯವರಿಗೆ ಚರ್ಚೆ ಮಾಡಲು ಬೇರೆ ವಿಷಯವೇ ಇಲ್ಲ, ಮಾಂಸಾಹಾರ ಸೇವನೆ ಮಾಡಿದ್ದಲ್ಲಿ ಯಾವುದೇ ತಪ್ಪಿಲ್ಲ, ಮಾಂಸಾಹಾರ ಸೇವಿಸಿ ದೇವಸ್ಥಾನಕ್ಕೆ ಹೋಗಿದ್ದು ತಪ್ಪಲ್ಲ ಎಂದಿದ್ದಾರೆ.
ಬಿಜೆಪಿಯವರು ಇಂತಹ ವಿಚಾರಗಳನ್ನು ಚರ್ಚೆ ಮಾಡುವುದನ್ನು ಬಿಟ್ಟು ಸಾವರ್ಕರ್ ವಿಚಾರಗಳನ್ನು ಚರ್ಚೆ ಮಾಡಿ. ಹಿಂದೂಗಳಲ್ಲಿ ಸಾಕಷ್ಟು ಜನರು ಮಾಂಸಾಹಾರಿಗಳಿದ್ದಾರೆ. ಹಿಂದೂ ದೇವರುಗಳಿಗೂ ಮಾಂಸಾಹಾರ ಪ್ರಸಾದ ಮಾಡ್ತಾರೆ. ಅದರಲ್ಲಿ ಏನಿದೆ ತಪ್ಪು? ಇದು ಚರ್ಚೆಯ ವಿಷಯವೇ ಅಲ್ಲ ಎಂದು ಅವರು ಹೇಳಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka