ಮೊಸರು ಕುಡಿಕೆ ಸ್ಪರ್ಧೆ ವೇಳೆ ಕೆಳಗೆ ಬಿದ್ದು ಸ್ಪರ್ಧಿ ಸಾವು: ಕಾರ್ಯಕ್ರಮ ಆಯೋಜಕರ ವಿರುದ್ಧ ಎಫ್ ಐಆರ್
ಮುಂಬೈ: ಮೊಸರು ಕುಡಿಕೆ ಸ್ಪರ್ಧೆ ವೇಳೆ ಮಾನವ ಪಿರಮಿಡ್ ನಿಂದ ಕೆಳಗೆ ಬಿದ್ದು 24 ವರ್ಷ ವಯಸ್ಸಿನ ಯುವಕ ದಾರುಣವಾಗಿ ಸಾವನ್ನಪ್ಪಿದ್ದು, ಘಟನೆಗೆ ಸಂಬಂಧಿಸಿದಂತೆ ಕಾರ್ಯಕ್ರಮ ಆಯೋಜಕರ ವಿರುದ್ಧ ಪೊಲೀಸರು ಎಫ್ ಐ ಆರ್ ದಾಖಲಿಸಿಕೊಂಡಿದ್ದಾರೆ.
ಮುಂಬೈಯ ವಿಲೆ ಪಾರ್ಲೆಯ ಭಾಮನ್ ವಾಡಿ ಪ್ರದೇಶದಲ್ಲಿ ಈ ಘಟನೆ ಶುಕ್ರವಾರ ನಡೆದಿತ್ತು. ನಡೆದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆಯ ಸಂದರ್ಭದಲ್ಲಿ ನಡೆದ ಮೊಸರು ಕುಡಿಕೆ ಉತ್ಸವದಲ್ಲಿ ಸ್ಪರ್ಧಿ ದುರಂತವಾಗಿ ಸಾವನ್ನಪ್ಪಿದ್ದಾನೆ
ಶುಕ್ರವಾರ ಮಾನವ ಪಿರಮಿಡ್ ನಿಂದ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಯುವಕ ಸೋಮವಾರ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದ. ಈ ಹಿನ್ನೆಲೆಯಲ್ಲಿ ಕಾರ್ಯಕ್ರಮ ಆಯೋಜಕರ ವಿರುದ್ಧ ಪೊಲೀಸರು ನಿರ್ಲಕ್ಷದಿಂದ ಸಾವು(304-ಎ), ಜೀವಕ್ಕೆ ಅಪಾಯವನ್ನುಂಟು ಮಾಡುವ ಕೃತ್ಯ-338ರ ಅನ್ವಯ ಪ್ರಕರಣ ದಾಖಲಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಈವರೆಗೆ ಯಾರನ್ನೂ ಬಂಧಿಸಲಾಗಿಲ್ಲ ಎಂದು ತಿಳಿದು ಬಂದಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka