ಉದ್ಯೋಗ ಕೊಡಿಸುವುದಾಗಿ 1.84 ಕೋಟಿಗೂ ಅಧಿಕ ಹಣ ಪಡೆದು ವಂಚನೆ: ಮಹಿಳೆ ಸಹಿತ ಮೂವರ ಬಂಧನ
ಸರಕಾರಿ ಸಂಸ್ಥೆಯಾದ ಕೆಎಂಎಫ್ ಡೈರಿನಲ್ಲಿ ಉದ್ಯೋಗ ದೊರಕಿಸಿ ಕೊಡುವುದಾಗಿ ನಂಬಿಸಿ 138ಕ್ಕೂ ಅಧಿಕ ಮಂದಿಯಿಂದ 1.84 ಕೋಟಿಗಿಂತ ಅಧಿಕ ಹಣ ಪಡೆದು ವಂಚಿಸಿದ ಆರೋಪದಡಿಯಲ್ಲಿ ಮಹಿಳೆ ಸಹಿತ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.
ಬಂಧಿತರನ್ನು ಪುತ್ತೂರು ತಾಲೂಕಿನ ಬಳ್ನಾಡು ಗ್ರಾಮದ ರಮೇಶ್ ಪೂಜಾರಿ ಬಿ.(41), ಮಂಗಳೂರಿನ ಅಳಪೆ ಪಡೀಲ್ ನ ಚಂದ್ರಾವತಿ (36), ಬೆಂಗಳೂರಿನ ಸುರೇಂದ್ರ ರೆಡ್ಡಿ ಜಿ.(36) ಎಂದು ಗುರುತಿಸಲಾಗಿದೆ.
ಈಗಾಗಲೇ ಮೂಲತಃ ಬಂಟ್ವಾಳ ತಾಲೂಕಿನ ಸಾಲೆತ್ತೂರಿನ ಪ್ರಸ್ತುತ ಮೂಡುಬಿದಿರೆ ತಾಲೂಕಿನ ಮಾಸ್ತಿಕಟ್ಟೆಯ ವಿವೇಕ ನಗರ ನಿವಾಸಿ ರಾಮ ಪ್ರಸಾದ್ ರಾವ್ ಪಿ. (37) ಎಂಬಾತನನ್ನು ಪೊಲೀಸರು ಬಂಧಿಸಿದ್ದರು. ಇದರೊಂದಿಗೆ ಈ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕು ಮಂದಿಯನ್ನು ಬಂಧಿಸಿದ್ದಾರೆ.
ಪ್ರಕರಣದಲ್ಲಿ ಇನ್ನೂ ಹಲವು ಮಂದಿ ಭಾಗಿಯಾಗಿದ್ದು, ಅವರ ಬಂಧನಕ್ಕೆ ಕ್ರಮ ಜರಗಿಸಲಾಗಿದೆ ಎಂದು ಶಶಿಕುಮಾರ್ ಮಾಹಿತಿ ನೀಡಿದ್ದಾರೆ. ಬಂಧಿಸಲ್ಪಟ್ಟ ಮೂವರು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಅವರಿಗೆ ನ್ಯಾಯಾಂಗ ಬಂಧನವಾಗಿದೆ.
ಪ್ರಮುಖ ಆರೋಪಿ ರಾಮ್ ಪ್ರಸಾದ್ ರಾವ್ ಎಂಬಾತನು ಹರೀಶ್, ಕೇಶವ, ಶಶಿಧರ ಇತ್ಯಾದಿ ಹೆಸರಿನಲ್ಲೂ ಗುರುತಿಸಿಕೊಂಡು ಕೆಎಂಎಫ್ ಡೈರಿಯಲ್ಲಿ ಉದ್ಯೋಗ ಕೊಡಿಸುವುದಾಗಿ ಹೇಳಿ ವಂಚಿಸಿದ್ದ ಎಂದು ಫರಂಗಿಪೇಟೆ ಸಮೀಪದ ವಳಚ್ಚಿಲ್ ಪದವಿನ ದೇವಿಪ್ರಸಾದ್ ಮತ್ತಿತರರು ಆಗಸ್ಟ್ 18ರಂದು ದೂರು ನೀಡಿದ್ದರು. ಅದರಂತೆ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka