1ನೇ ತರಗತಿಯ ಬಾಲಕಿಯ ಮೇಲೆ ಬೀದಿ ನಾಯಿಗಳ ದಾಳಿ
ಉಡುಪಿ: ಮಣಿಪಾಲ ಅಕಾಡೆಮಿ ಸ್ಕೂಲಿನ ಒಂದನೇ ತರಗತಿ ವಿದ್ಯಾರ್ಥಿನಿ ಮೇಲೆ ಬೀದಿ ನಾಯಿಗಳ ಗುಂಪೊಂದು ಮೈಮೇಲೆ ಎರಗಿ ಗಂಭೀರವಾಗಿ ಗಾಯಗೊಳಿಸಿರುವ ಘಟನೆ ಬುಧವಾರ ನಡೆದಿದೆ. ಬಾಲಕಿಯನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಇತೀಚಿನ ದಿನಗಳಲ್ಲಿ ಬೀದಿ ನಾಯಿಗಳ ಸಂಖ್ಯೆ ನಗರದಲ್ಲಿ ಬಹಳವಾಗಿ ಹೆಚ್ಚಳ ಕಂಡಿದೆ. ಹಿರಿಯ ನಾಗರಿಕರು, ಚಿಕ್ಕಮಕ್ಕಳು, ಶಾಲಾ ವಿದ್ಯಾರ್ಥಿಗಳ ತಿರುಗಾಟಕ್ಕೂ ಭೀತಿ ಎದುರಾಗಿದೆ.
ಸಾರ್ವಜನಿಕರ ಮೇಲೆ ದಾಳಿ ನಡೆಸಿರುವ ಪ್ರಕರಣಗಳು ಬಹಳಷ್ಟು ನಡೆದಿವೆ. ಸಮಸ್ಯೆಯ ಮುಕ್ತಿಗಾಗಿ ನಗರಸಭೆ ತಕ್ಷಣವಾಗಿ ನಗರದಲ್ಲಿ ನೆಲೆ ಕಂಡಿರುವ ನೂರಾರು ಬೀದಿ ನಾಯಿಗಳನ್ನು ಸೆರೆ ಹಿಡಿದು, ಶ್ವಾನ ಪುರ್ನವಸತಿ ಕೇಂದ್ರಗಳಲ್ಲಿ ದಾಖಲಿಸುವಂತೆ ನಾಗರಿಕ ಸಮಿತಿಯ ಕಾರ್ಯಕರ್ತರಾದ ನಿತ್ಯಾನಂದ ಒಳಕಾಡು, ತಾರಾನಾಥ ಮೇಸ್ತ ಶಿರೂರು ಅವರು ಆಗ್ರಹಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka