ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಜೊತೆ ಶಾಸಕ ರಘುಪತಿ ಭಟ್ ಶ್ರೀಕೃಷ್ಣ ಮಠಕ್ಕೆ ಭೇಟಿ
ಉಡುಪಿ: ಜಿಲ್ಲಾ ರಜತೋತ್ಸವದ ಉದ್ಘಾಟನೆಗೆ ಆಗಮಿಸಿದ ಕರ್ನಾಟಕ ರಾಜ್ಯ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರೊಂದಿಗೆ ಶಾಸಕ ಕೆ.ರಘುಪತಿ ಭಟ್ ಅವರು ಶ್ರೀಕೃಷ್ಣ ಮಠಕ್ಕೆ ಇಂದು ಭೇಟಿ ನೀಡಿ ಶ್ರೀ ಕೃಷ್ಣನ ದರ್ಶನ ಪಡೆದು ಪರ್ಯಾಯ ಶ್ರೀ ಕೃಷ್ಣಾಪುರ ಮಠದ ಶ್ರೀ ಶ್ರೀ ಶ್ರೀ ವಿದ್ಯಾಸಾಗರ ತೀರ್ಥ ಶ್ರೀಪಾದರಿಂದ ಮಂತ್ರಾಕ್ಷತೆ ಪಡೆದರು.
ಈ ಸಂದರ್ಭದಲ್ಲಿ ಕೇಂದ್ರ ಕೃಷಿ ಹಾಗೂ ರೈತ ಕಲ್ಯಾಣ ರಾಜ್ಯ ಸಚಿವರಾದ ಶೋಭಾ ಕರಂದ್ಲಾಜೆ, ಮೀನುಗಾರಿಕಾ ಬಂದರು ಮತ್ತು ಒಳನಾಡು ಜಲ ಸಾರಿಗೆ ಸಚಿವರು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಅಂಗಾರ, ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ವಿ ಸುನಿಲ್ ಕುಮಾರ್ ಜೊತೆಗಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka