ಚಿಕಿತ್ಸೆ ಪಡೆದರೂ ನಿದ್ರಾಹೀನತೆ ಗುಣವಾಗಲಿಲ್ಲ: ಆತ್ಮಹತ್ಯೆಗೆ ಶರಣಾದ ಮಹಿಳೆ
ಉಡುಪಿ: ನಿದ್ರಾಹೀನತೆಯಿಂದ ಬಳಲುತ್ತಿದ್ದ ಮಹಿಳೆಯೋರ್ವಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾವಂಜೆ ಗ್ರಾಮದ ದೇವಸ್ಥಾನಬೆಟ್ಟು ಎಂಬಲ್ಲಿ ನಡೆದಿದೆ.
ದೇವಸ್ಥಾನಬೆಟ್ಟು ನಿವಾಸಿ ಪಾರ್ವತಿ ಅವರ ಮಗಳು 36 ವರ್ಷ ಪ್ರಾಯದ ಉಷಾ ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಇವರು ನಿದ್ರಾಹೀನತೆಯಿಂದ ಬಳಲುತ್ತಿದ್ದು, ಹಿರಿಯಡ್ಕ ಹಾಗೂ ಉಡುಪಿಯ ಟಿಎಂಎ ಪೈ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದರು.
ಚಿಕಿತ್ಸೆ ಪಡೆದುಕೊಂಡರೂ ಆರೋಗ್ಯ ಸುಧಾರಿಸಿಲ್ಲ. ಇದೇ ಕಾರಣದಿಂದ ಜೀವನದಲ್ಲಿ ಬೇಸತ್ತು ಆ. 24ರ ರಾತ್ರಿಯಿಂದ ಆ.25ರ ಬೆಳಗಿನ ಜಾವ 3 ಗಂಟೆಯ ಮಧ್ಯೆ ಮನೆಯ ಹತ್ತಿರದ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka