17 ವರ್ಷದ ಬಾಲಕನಿಗೆ ಕ್ಯಾನ್ಸರ್ ಗೆಡ್ಡೆ ತೆರವಿನ ಕ್ಲಿಷ್ಟಕರ ಶಸ್ತ್ರಚಿಕಿತ್ಸೆ ಯಶಸ್ವಿ
ಕಣಚೂರು ಹಾಸ್ಪಿಟಲ್ ಆ್ಯಂಡ್ ರಿಸರ್ಚ್ ಸೆಂಟರಲ್ಲಿ 17 ವರ್ಷದ ಬಾಲಕನಲ್ಲಿ ಕಾಣಿಸಿಕೊಂಡ ಅಪರೂಪದ ಕ್ಯಾನ್ಸರ್ ಗೆಡ್ಡೆ ತೆರವಿನ ಕ್ಲಿಷ್ಟಕರ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನಿರ್ವಹಿಸಲಾಗಿದೆ ಎಂದು ಸಂಸ್ಥೆಯ ಆಡಳಿತಾಧಿಕಾರಿ ಅಬ್ದುಲ್ ರಹಿಮಾನ್ ತಿಳಿಸಿದ್ದಾರೆ.
ದೇರಳಕಟ್ಟೆಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಚಿಕಿತ್ಸೆಯನ್ನು ಆಸ್ಪತ್ರೆಯ ತಜ್ಞವೈದ್ಯರಾದ ರವಿವರ್ಮ, ಗುರುಪ್ರಸಾದ್, ನಝೀಬ್ ನೇತೃತ್ವದ ತಂಡ ಯಶಸ್ವಿಯಾಗಿ ನೆರವೇರಿಸಿದೆ ಎಂದು ಅವರು ತಿಳಿಸಿದರು.
1,000 ಹಾಸಿಗೆಗಳುಳ್ಳ ಕಣಚೂರು ಆಸ್ಪತ್ರೆಯಲ್ಲಿ ಈ ರೀತಿಯ ಕ್ಲಿಷ್ಟಕರ ಕ್ಯಾನ್ಸರ್ ಚಿಕಿತ್ಸೆಗೆ ಪರಿಣಾಮಕಾರಿ ಚಿಕಿತ್ಸೆ ನೀಡುವ ತಜ್ಞ ವೈದ್ಯರ ತಂಡವಿದೆ. ಕೊಪ್ಪದ 17 ವರ್ಷದ ಬಾಲಕನಿಗೆ ಮೆದುಳು, ಕಣ್ಣು, ಬಾಯಿ, ದವಡೆಯ ಸಂಪರ್ಕ ಭಾಗದಲ್ಲಿ ಕಾಣಿಸಿಕೊಂಡ ಕ್ಯಾನ್ಸರ್ ಗೆಡ್ಡೆ ದಿನಕಳೆದಂತೆ ಉಲ್ಬಣಿಸಿತ್ತು.
ಹಲವು ಆಸ್ಪತ್ರೆಯ ವೈದ್ಯರು ಕೈಚೆಲ್ಲಿದ ಸಂದರ್ಭದಲ್ಲಿ ಕಣಚೂರು ಆಸ್ಪತ್ರೆಯ ವೈದ್ಯರ ತಂಡ ಈ ಸವಾಲನ್ನು ಸ್ವೀಕರಿಸಿ ಯಶಸ್ವಿಯಾಗಿ ಚಿಕಿತ್ಸೆ ನೀಡಿದೆ. ರೋಗಿಯ ಕುಟುಂಬದ ಆರ್ಥಿಕ ಪರಿಸ್ಥಿತಿಯನ್ನು ಗಮನಿಸಿ ಆಯುಷ್ಮಾನ್ ಭಾರತ್ ಯೋಜನೆಯಡಿ ಭರಿಸಲು ಸಾಧ್ಯ ವಾಗದ ಸಂದರ್ಭದಲ್ಲಿ ಈ ಚಿಕಿತ್ಸೆಯ ದುಬಾರಿ ವೆಚ್ಚವನ್ನು ಆಸ್ಪತ್ರೆಯ ಆಡಳಿತವೇ ಭರಿಸಿದೆ ಎಂದವರು ವಿವರಿಸಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka