ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಸಹೋದರ ನಿಧನ: ಸಿಎಂ ಬೊಮ್ಮಾಯಿ ಸಂತಾಪ
ಮೈಸೂರು: ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಿಎಂ ಅವರ ಕೊನೆಯ ಸಹೋದರ ರಾಮೇಗೌಡ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.
ಮೈಸೂರಿನ ಸಿದ್ದರಾಮನಹುಂಡಿಯಲ್ಲಿ ವಾಸವಾಗಿದ್ದ ಸಿದ್ದರಾಮೇಗೌಡ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದರು. ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಾಮೇಗೌಡರನ್ನು ಸಿದ್ದರಾಮಯ್ಯನವರು ಒಂದು ದಿನದ ಹಿಂದೆಯಷ್ಟೇ ಭೇಟಿ ಮಾಡಿ, ಆರೋಗ್ಯ ವಿಚಾರಿಸಿದ್ದರು.
ನಿನ್ನೆ ರಾತ್ರಿ ಸಿದ್ದರಾಮೇಗೌಡ ಅವರು ಕೊನೆಯುಸಿರೆಳೆದಿದ್ದು, ಅವರ ಅಂತ್ಯ ಸಂಸ್ಕಾರಕ್ಕೆ ಸಿದ್ದರಾಮನಹುಂಡಿಯಲ್ಲಿ ಸಕಲ ಸಿದ್ಧತೆಗಳನ್ನು ಮಾಡಲಾಗಿದೆ.
ಸಿಎಂ ಬೊಮ್ಮಾಯಿ ಸಂತಾಪ:
ವಿರೋಧ ಪಕ್ಷದ ನಾಯಕರಾದ ಶ್ರೀ ಸಿದ್ದರಾಮಯ್ಯ ರವರ ಕಿರಿಯ ಸಹೋದರ ಶ್ರೀ ರಾಮೇಗೌಡ ಅವರ ನಿಧನದ ವಿಷಯ ತಿಳಿದು ದುಃಖಿತನಾಗಿದ್ದೇನೆ. ಭಗವಂತನು ಅವರ ಆತ್ಮಕ್ಕೆ ಶಾಂತಿ ನೀಡಿ, ಕುಟುಂಬ ವರ್ಗದವರಿಗೆ ಈ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka