ಪ್ರಧಾನಮಂತ್ರಿ ಮಾತೃ ವಂದನಾ ಯೋಜನೆಯಡಿ 5 ಸಾವಿರ ರೂ. ಪಡೆಯಿರಿ
11/12/2020
ಹಾಸನ: ಪ್ರಧಾನಮಂತ್ರಿ ಮಾತೃ ವಂದನಾ ಯೋಜನೆಯಲ್ಲಿ ಮೊದಲನೆ ಮಗುವಿನ ಗರ್ಭಿಣಿ ಆರೈಕೆಗಾಗಿ ನೀಡುವ ನಗದು ಹಣ ರೂ 5000 ಗಳನ್ನು ಪಡೆಯಲು ಹಾಸನ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನೆ ಇಲಾಖೆವತಿಯಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಎಲ್ಲಾ ಮೊದಲನೆ ಮಗುವಿನ ಗರ್ಭಿಣಿಯರು ಇದರ ಪ್ರಯೋಜನ ಪಡೆಯಬಹುದಾಗಿದ್ದು ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಅಂಗನವಾಡಿ ಕಾರ್ಯಕರ್ತೆಯನ್ನು ಅಥವಾ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯ ದೂ.ಸಂ 08172-267223 ಸಂಪರ್ಕಿಸಬಹುದಾಗಿದೆ ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ತಿಳಿಸಿದ್ದಾರೆ.