ಡಾ.ಬಿ.ಆರ್.ಅಂಬೇಡ್ಕರ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟ: ಬ್ಯಾಟ್ ಹಿಡಿದು ಮೈದಾನಕ್ಕಿಳಿದ ಎನ್.ಮಹೇಶ್ - Mahanayaka
10:57 PM Wednesday 11 - December 2024

ಡಾ.ಬಿ.ಆರ್.ಅಂಬೇಡ್ಕರ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟ: ಬ್ಯಾಟ್ ಹಿಡಿದು ಮೈದಾನಕ್ಕಿಳಿದ ಎನ್.ಮಹೇಶ್

n mahesh
28/08/2022

ಕೊಳ್ಳೇಗಾಲ: ಮಾಜಿ ಸಚಿವ, ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಅವರು ಕೊಳ್ಳೇಗಾಲದ MGSV ಆವರಣದಲ್ಲಿ ಡಾ. ಬಿ ಆರ್ ಅಂಬೇಡ್ಕರ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ ನೀಡಿದರು.

ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಭಾವ ಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದ ಎನ್.ಮಹೇಶ್, ಬಳಿಕ ಕ್ರೀಡಾಪಟುಗಳನ್ನು ಪರಿಚಯ ಮಾಡಿಕೊಂಡರು. ಕೈ ಕುಲುಕುವ ಮೂಲಕ ಕ್ರೀಡಾಪಟುಗಳನ್ನು ಇದೇ ವೇಳೆ ಅವರು ಪ್ರೋತ್ಸಾಹಿಸಿದರು.

ಬಳಿಕ ಬ್ಯಾಟ್ ಹಿಡಿದು ಮೈದಾನಕ್ಕಿಳಿದ ಶಾಸಕರು, ಪ್ರತಿ ಎಸೆತವನ್ನೂ  ಎದುರಿಸಿ ಚೆಂಡನ್ನು ಮೈದಾನದಿಂದ ಹೊರಗಟ್ಟಿದರು. ಈ ವೇಳೆ ಕಾರ್ಯಕ್ರಮ ಆಯೋಜಕರು ಸೇರಿದಂತೆ ಹಲವು ಮುಖಂಡರು ಇದ್ದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ