ಬೈಕ್ ಗಳ ನಡುವೆ ಭೀಕರ ಅಪಘಾತ: ಕಾಲೇಜಿಗೆ ಹೋಗುತ್ತಿದ್ದ ವಿದ್ಯಾರ್ಥಿ ಸಾವು, ಇಬ್ಬರ ಸ್ಥಿತಿ ಗಂಭೀರ
ಬೆಳ್ತಂಗಡಿ: ಎರಡು ಬೈಕ್ ನಡುವೆ ಅಪಘಾತ ನಡೆದು ಒಂದು ಬೈಕ್ ನಲ್ಲಿ ಕಾಲೇಜಿಗೆ ಹೋಗುತ್ತಿದ್ದ ವಿದ್ಯಾರ್ಥಿ ಸಾವನ್ನಪ್ಪಿದ್ದು, ಇನ್ನೊಂದು ಬೈಕ್ ನಲ್ಲಿದ್ದ ಇಬ್ಬರಿಗೆ ಗಂಭೀರ ಗಾಯವಾಗಿರುವ ಘಟನೆ ಪುಂಜಾಲಕಟ್ಟೆಯಲ್ಲಿ ಇಂದು ಬೆಳಗ್ಗೆ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಪುಂಜಾಲಕಟ್ಟೆ ಮೇಲಿನ ಪೇಟೆ ಶಾರದಾ ಮಂಟಪದ ಬಳಿ ಬೈಕ್ ಗಳ ನಡುವೆ ಇಂದು ಬೆಳಗ್ಗೆ ಡಿಕ್ಕಿ ಹೊಡೆದಿದ್ದು ಇದರಲ್ಲಿ ಒಂದು ಬೈಕ್ ನಲ್ಲಿ ಮಂಗಳೂರು ಕಾಲೇಜಿಗೆ ಹೋಗುತ್ತಿದ್ದ ವಿದ್ಯಾರ್ಥಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಮತ್ತೊಂದು ಬೈಕ್ ನಲ್ಲಿದ್ದ ಮಂಡತ್ಯಾರ್ ತರಕಾರಿ ಅಂಗಡಿಯ ಕೆಲಸಗಾರರಿಬ್ಬರು ಗಂಭೀರ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಸಾವನ್ನಪ್ಪಿದ ವಿದ್ಯಾರ್ಥಿ ಬೆಳ್ತಂಗಡಿ ತಾಲೂಕಿನ ಕರಾಯ ನಿವಾಸಿ ಮಂಗಳೂರು ಸೈಂಟ್ ಅಲೋಷಿಯಸ್ ಕಾಲೇಜಿನ ಎರಡನೇ ವರ್ಷದ ಬಿಬಿಎ ವಿದ್ಯಾರ್ಥಿ ಮಹಮ್ಮದ್ ಶಫೀಕ್(20) ಎಂದು ಗುರುತಿಸಲಾಗಿದೆ.
ಇನ್ನೊಂದು ಬೈಕ್ ನಲ್ಲಿದ್ದವರು ಮಂಡತ್ಯಾರಿನ ತರಕಾರಿ ಅಂಗಡಿಯಲ್ಲಿ ಕೆಲಸ ಮಾಡುವವರ ಎನ್ನಲಾಗಿದೆ. ಸ್ಥಳಕ್ಕೆ ಪುಂಜಾಲಕಟ್ಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಬಗ್ಗೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka