ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪುತ್ತೂರಿಗೆ ಭೇಟಿ - Mahanayaka

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪುತ್ತೂರಿಗೆ ಭೇಟಿ

thawar chand gehlot
30/08/2022

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ವಿವೇಕಾನಂದ  ಕಲೆ, ವಾಣಿಜ್ಯ ಮತ್ತು ವಿಜ್ಞಾನ ಸ್ವಾಯತ್ತ ಕಾಲೇಜನ್ನು ಉದ್ಘಾಟಿಸಲು ಇಂದು ಬೆಳಿಗ್ಗೆ ಬಜ್ಪೆಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.

ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ್, ಪೋಲಿಸ್ ಆಯುಕ್ತ ಶಶಿಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಷ್ ಭಗವಾನ್ ಸೋನಾವಣೆ, ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್  ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಸ್ವಾಗತಿಸಿ, ಬರಮಾಡಿಕೊಂಡರು. ರಾಜ್ಯಪಾಲರು ಪುತ್ತೂರಿನ ವಿವೇಕಾನಂದ ಕಾಲೇಜಿಗೆ ತೆರಳಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ