ರಸ್ತೆ ಬದಿಯ ಚರಂಡಿಗೆ ಬೈಕ್ ಬಿದ್ದು ಸವಾರನ ದಾರುಣ ಸಾವು
ಬೈಕೊಂದು ಸವಾರನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಬಿದ್ದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಅಂಬಲ್ಪಾಡಿ ಸಮೀಪದ ಸರ್ವಿಸ್ ರಸ್ತೆಯಲ್ಲಿ ಇಂದು ಸಂಜೆ ನಡೆದಿದೆ.
ಮೃತರನ್ನು ಕೊಡವೂರಿನ ಲಿಯನ್ ವಿಲ್ಸನ್ ಅಮ್ಮನ್ನ 19 ವರ್ಷ ಎಂದು ಗುರುತಿಸಲಾಗಿದೆ ಇವರು ಅಂಬಲಪಾಡಿ ಕಡೆಯಿಂದ ಕಿನ್ನಿಮುಲ್ಕಿ ಕಡೆಗೆ ರಾಷ್ಟ್ರೀಯ ಹೆದ್ದಾರಿ ಅರವತ್ತ ಆರರ ಸರ್ವಿಸ್ ರಸ್ತೆಯಲ್ಲಿ ಹೋಗುತ್ತಿದ್ದಾಗ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಬಿತ್ತೆನ್ನಲಾಗಿದೆ.
ಇದರಿಂದ ಗಂಭೀರವಾಗಿ ಗಾಯಗೊಂಡ ಲಿಯಾನ್ ರಾತ್ರಿ ವೇಳೆ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು ಈ ಬಗ್ಗೆ ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka