ಕೊನೆಗೂ ಪೋಕ್ಸೋ ಕಾಯ್ದೆಯಡಿ ಮುರುಘಾ ಶ್ರೀ ಪೊಲೀಸ್ ವಶಕ್ಕೆ - Mahanayaka

ಕೊನೆಗೂ ಪೋಕ್ಸೋ ಕಾಯ್ದೆಯಡಿ ಮುರುಘಾ ಶ್ರೀ ಪೊಲೀಸ್ ವಶಕ್ಕೆ

muruga shree
01/09/2022

ಅಮಾಯಕ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪೋಕ್ಸೋ ಕಾಯ್ದೆ ದಾಖಲಾಗಿದ್ದರೂ, ಚಿತ್ರದುರ್ಗದ ಮುರುಘಾ ಮಠದ ಡಾ.ಶಿವಮೂರ್ತಿ ಮುರುಘಾ ಶರಣರ ಬಂಧನವಾಗಿರಲಿಲ್ಲ.  ಇದೀಗ ಕೊನೆಗೂ ಸ್ವಾಮೀಜಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಮೈಸೂರಿನ ಒಡನಾಡಿ ಸಂಸ್ಥೆಯ ಮೂಲಕ ಸಂತ್ರಸ್ತ ವಿದ್ಯಾರ್ಥಿನಿಯರು ನ್ಯಾಯದ ಮೊರೆ ಹೋಗಿದ್ದರು. ಮೈಸೂರಿನ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯು ನಗರದ ನಜರಾಬಾದ್ ಠಾಣೆಯಲ್ಲಿ ಈ ಸಂಬಂಧ ದೂರು ದಾಖಲಿಸಿತ್ತು. ಬಳಿಕ ಈ ದೂರು ಚಿತ್ರದುರ್ಗ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿತ್ತು.

ಬಂಧನದ ಭೀತಿ ಎದುರಿಸುತ್ತಿದ್ದ ಶ್ರೀಗಳು ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ಸೆ.2ರಂದು ವಿಚಾರಣೆಯಾಗಲಿದೆ. ವರದಿಗಳ ಪ್ರಕಾರ ಈ ಬೆಳವಣಿಗೆಗಳ ನಡುವೆಯೇ ಇಂದು ಸಂಜೆ ಎಲ್ಲ ಆರೋಪಿಗಳ ವಿರುದ್ಧ ಲುಕೌಟ್ ನೋಟಿಸ್ ಜಾರಿಯಾಗಿತ್ತು ಎನ್ನಲಾಗಿದೆ.

ಇನ್ನೂ ಸ್ವಾಮೀಜಿ ವಿರುದ್ಧ ಪೋಕ್ಸೋ ಕಾಯ್ದೆ ದಾಖಲಾಗಿದ್ದರೂ, ಪ್ರಭಾವಿ ಎನ್ನುವ ಕಾರಣಕ್ಕೆ ಪೊಲೀಸರು ಅವರನ್ನು ಇನ್ನೂ ಬಂಧಿಸದೇ ಕರ್ತವ್ಯ ಲೋಪ ಎಸಗಿರುವುದು ಕಂಡುಬರುತ್ತಿದ್ದು, ಈ ಸಂಬಂಧ ರಾಜ್ಯಾದ್ಯಂತ ಭಾರೀ ಪ್ರತಿಭಟನೆ ನಡೆಸಲು ವಿವಿಧ ಸಂಘಟನೆಗಳು ಸಜ್ಜಾಗಿವೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ