ಸಹೋದರ ಸಹೋದರಿಯರೇ ಅನ್ನುತ್ತಾ ಭಾಷಣ ಆರಂಭಿಸಿದ ಪ್ರಧಾನಿ ಮೋದಿ
ಮಂಗಳೂರು: ನಗರದ ಗೋಲ್ಡ್ ಫಿಂಚ್ ಮೈದಾನದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರು, ತಮ್ಮ ಮಾತಿಗೂ ಮೊದಲು ಸಹೋದರ ಸಹೋದರಿಯರೇ ಎಂದು ಹೇಳುವ ಮೂಲಕ ಭಾಷಣ ಆರಂಭಿಸಿದರು.
ಮಂಗಳೂರಲ್ಲಿ ಮೂರು ಸಾವಿರ ಕೋಟಿ ಯೋಜನೆಗಳಿಗೆ ಚಾಲನೆ ನೀಡಿದ್ದೀವಿ. ಹಲವು ಅಭಿವೃದ್ಧಿ ಯೋಜನೆಗಳಿಗೆ ಶಿಲಾನ್ಯಾಸ ನೇರವೇರಿದಿದೆ. ಮೀನು ಉದ್ಯಮಮವನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ಯಲಿದೆ ಎಂದು ಪ್ರಧಾನಿ ಮೋದಿ ಹೇಳಿದರು.
ಜಗತ್ತಿನಲ್ಲಿ ನಮ್ಮ ಪ್ರಾಡಕ್ಟ್ ಗೆ ಉತ್ತಮ ಬೇಡಿಕೆ ಸಿಗಲಿದೆ. ಸಾಗರಮಾಲಾ ಯೋಜನೆ ಮೂಲಕ ಕರಾವಳಿಗೆ ಶಕ್ತಿ ಸಿಗಲಿದೆ. ಡಬಲ್ ಇಂಜಿನ್ ಸರ್ಕಾರ ಹಿಂದಿನ ಸರ್ಕಾರಕ್ಕಿಂತ ಪ್ರಭಾವಶಾಲಿಯಾಗಿದೆ. ಆಯುಷ್ಮಾನ್ ಕಾರ್ಡ್ ಮೂಲಕ ಬಡವರಿಗೆ ಲಾಭವಾಗಲಿದೆ ಎಂದು ಇದೇ ವೇಳೆ ಪ್ರಧಾನಿ ಹೇಳಿದರು.
ಕಿಸಾನ್ ಕ್ರೆಡಿಟ್ ಕಾರ್ಡ್ ವಿತರಣೆ:
ಇನ್ನೂ ಮಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕಿಸಾನ್ ಕ್ರೆಡಿಟ್ ಕಾರ್ಡ್ ವಿತರಣೆ ಮಾಡಿದ್ರು. ಸಾಂಕೇತಿಕವಾಗಿ ಮೂರು ಮಂದಿಗೆ ಕ್ರೆಡಿಟ್ ಕಾರ್ಡ್ ವಿತರಣೆ ಮಾಡಲಾಯಿತು.
ಮನೋಜ್, ಶ್ರೀನಿವಾಸ ಪುತ್ರನ್ ಎಂಬವರಿಗೆ ಪ್ರಧಾನಿ ನರೇಂದ್ರ ಮೋದಿ ಮಂಗಳೂರಿನ ಗೋಲ್ಡ್ ಫಿಂಚ್ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಿಸಾನ್ ಕಾರ್ಡ್ ವಿತರಿಸಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka