ಇಬ್ಬರು ಮಕ್ಕಳಿಗೆ ವಿಷ ಉಣಿಸಿ ಆತ್ಮಹತ್ಯೆಗೆ ಶರಣಾದ ತಾಯಿ!
04/09/2022
ರಾಮನಗರ: ತಾಯಿಯೊಬ್ಬರು ತನ್ನಿಬ್ಬರು ಮಕ್ಕಳಿಗೆ ವಿಷ ನೀಡಿ ತಾನೂ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಹೃದಯ ವಿದ್ರಾವಕ ಘಟನೆ ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಹೊಸಪಾಳ್ಯದಲ್ಲಿ ನಡೆದಿದೆ.
ರೂಪಾ(30) ಹಾಗೂ ಅವರ ಮಕ್ಕಳಾದ 6 ವರ್ಷ ವಯಸ್ಸಿನ ಹರ್ಷಿತಾ, 4 ವರ್ಷದ ಸ್ಪೂರ್ತಿ ಆತ್ಮಹತ್ಯೆಗೆ ಶರಣಾಗಿರುವವರಾಗಿದ್ದು, ತಾಯಿ ಮಕ್ಕಳಿಗೆ ವಿಷ ಉಣಿಸಿ, ಬಳಿಕ ತಾನೂ ಸೇವಿಸಿದ್ದಾರೆ ಎನ್ನಲಾಗಿದೆ.
ರೂಪಾ ಅವರು ತಾಲೂಕು ರೈತ ಸಂಘದ ಅಧ್ಯಕ್ಷ ಲೋಕೇಶ್ ಅವರ ಪತ್ನಿ ಎಂದು ತಿಳಿದು ಬಂದಿದೆ. ಘಟನೆ ಸಂಬಂಧ ಮಾಗಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka