ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ವಿವಿಧ ಕಡೆಗಳಲ್ಲಿ ಎನ್ ಐಎ ದಾಳಿ
ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಯುವಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳ ಚುರುಕುಗೊಳಿಸಿದೆ.
ಸುಳ್ಯ ಸೇರಿದಂತೆ ವಿವಿಧ ಕಡೆಗಳಲ್ಲಿ ಎನ್ ಐಎ ಅಧಿಕಾರಿಗಳ ತಂಡ ದಾಳಿ ನಡೆಸಿ ತನಿಖೆ ಕೈಗೊಂಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಬಂಧಿತರಾಗಿರುವ ಆರೋಪಿಗಳ ಮನೆ ಮತ್ತಿತರ ಕಡೆಗಳಲ್ಲಿ ತನಿಖೆ ನಡೆಸಿ ಮಾಹಿತಿ ಕಲೆ ಹಾಕಲಾಗುತ್ತಿದೆ.
ಪ್ರವೀಣ್ ನೆಟ್ಟಾರು ಪ್ರಕರಣದ ತನಿಖೆ ನಡೆಸಿದ ಪೊಲೀಸರು 10 ಮಂದಿ ಆರೋಪಿಗಳನ್ನು ಬಂಧಿಸಿದ್ದರು. ಬಳಿಕ ಸರಕಾರ ಪ್ರಕರಣವನ್ನು ಎನ್‌ಐಎ ಗೆ ಹಸ್ತಾಂತರ ಮಾಡಿತ್ತು. ಇದೀಗ ದ.ಕ.ಜಿಲ್ಲೆಯಲ್ಲಿ ಬೀಡುಬಿಟ್ಟ ಎನ್.ಐ.ಎ ತಂಡ ಕಾರ್ಯಾಚರಣೆ ಆರಂಭ ಮಾಡಿ ವಿವಿಧ ಕಡೆಗಳಿಗೆ ದಾಳಿ ನಡೆಸಿ ತನಿಖೆ ನಡೆಸುತ್ತಿದೆ.
ದ.ಕ.ಜಿಲ್ಲೆಯ ಪುತ್ತೂರು, ಸುಳ್ಯ, ಬೆಳ್ಳಾರೆ, ಸೇರಿ ವಿವಿಧ ಕಡೆಗಳಲ್ಲಿ ಎನ್. ಐ.ಎ ತಂಡ ತನಿಖೆ ಕೈಗೊಂಡಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka