ಪ್ರವಾಹ ಪರಿಶೀಲನೆಯ ಸಭೆಯಲ್ಲಿ ಆರ್.ಅಶೋಕ್ ಭರ್ಜರಿ ನಿದ್ದೆ: ಕಾಂಗ್ರೆಸ್ ನಿಂದ ವ್ಯಂಗ್ಯ - Mahanayaka
8:17 AM Thursday 12 - December 2024

ಪ್ರವಾಹ ಪರಿಶೀಲನೆಯ ಸಭೆಯಲ್ಲಿ ಆರ್.ಅಶೋಕ್ ಭರ್ಜರಿ ನಿದ್ದೆ: ಕಾಂಗ್ರೆಸ್ ನಿಂದ ವ್ಯಂಗ್ಯ

r ashok
06/09/2022

ಬೆಂಗಳೂರು: ಪ್ರವಾಹ ಪರಿಶೀಲನೆಯ ವಿಡಿಯೋ ಕಾನ್ಫರೆನ್ಸ್ ಸಭೆಯಲ್ಲಿ ಕಂದಾಯ ಸಚಿವ ಆರ್.ಅಶೋಕ್ ಭರ್ಜರಿ ನಿದ್ದೆಗೆ ಜಾರಿದ್ದಾರೆ ಎಂದು ರಾಜ್ಯ ಕಾಂಗ್ರೆಸ್ ಆರೋಪಿಸಿದ್ದು, ಆರ್.ಅಶೋಕ್ ಸಭೆಯಲ್ಲಿ ಭಾಗಿಯಾಗಿದ್ದ ರೀತಿಯನ್ನು ಕಾಂಗ್ರೆಸ್ ವ್ಯಂಗ್ಯವಾಡಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್ ಮುಳುಗುವುದರಲ್ಲಿ ಹಲವು ವಿಧಗಳಿವೆ. ರಾಜ್ಯದ ಜನ ಮಳೆಯಲ್ಲಿ ಮುಳುಗಿದ್ದಾರೆ. ಸಚಿವರು ನಿದ್ದೆಯಲ್ಲಿ ಮುಳುಗಿದ್ದಾರೆ. ಪ್ರವಾಹ ಪರಿಶೀಲನೆಯ ವಿಡಿಯೋ ಕಾನ್ಫರೆನ್ಸ್ನಲ್ಲಿ ಸಚಿವ ಆರ್.ಅಶೋಕ್ ಅವರ ಭರ್ಜರಿ ನಿದ್ದೆ. ಹಲಾಲ್ ಕಟ್ ಎಂದರೆ ಥಟ್ನೆ ಎಚ್ಚರಾಗುತ್ತಾರೆ. ಚಿಂತೆ ಇಲ್ಲದವನಿಗೆ ಸಂತೆಯಲ್ಲೂ ನಿದ್ದೆ ಎಂಬ ಮಾತು ಸಚಿವರಿಗೆ ಹೇಳಿದ್ದೇನೋ ಎಂದು ಎಂದು ವ್ಯಂಗ್ಯವಾಡಿದೆ.

ಇನ್ನು ಬಿಜೆಪಿ ಪ್ರಣಾಳಿಕೆಯ ಭರವಸೆಗಳು ಆಕರ್ಷಕ, ಮನಮೋಹಕ. ಆಡಳಿತ ಮಾತ್ರ ಜನತೆಗೆ ಯಾತನಾದಾಯಕ, ಭ್ರಷ್ಟಾಚಾರವೇ ಕಾಯಕ. ಬೆಂಗಳೂರನ್ನು ವಿಶ್ವದರ್ಜೆಯ ನಗರ ಮಾಡುವೆವು ಎಂದ ಬಿಜೆಪಿ ಈಗ ರಸ್ತೆಗುಂಡಿಗಳ ನಗರ, ಮುಳುಗುವ ನಗರವನ್ನಾಗಿ ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದೆ.

ಐಟಿ ಕಂಪೆನಿಗಳು ಗುಳೆ ಹೊರಟರೂ ಕೊಟ್ಟ ಭರವಸೆ ನೆನಪಾಗಲಿಲ್ಲವೇ ರಾಜ್ಯ ಸರ್ಕಾರಕ್ಕೆ ಬೆಂಗಳೂರಿನ ಬೆಲೆ ಗೊತ್ತಿಲ್ಲ. ಬಿಜೆಪಿಯವರು ಬ್ರ್ಯಾಂಡ್ ಬೆಂಗಳೂರನ್ನು ಹಾಳು ಮಾಡಿದ್ದಾರೆ. ಮಳೆಯಿಂದ ಪರಿಸ್ಥಿತಿ ಸಂಪೂರ್ಣ ಹದಗೆಟ್ಟಿದ್ದರೂ ಏನಾದರೂ ಕ್ರಮ ಕೈಗೊಂಡಿದ್ದಾರಾ? ಬಿಜೆಪಿ ಬೆಂಗಳೂರಿನ ಗೌರವ ಉಳಿಸುವ ಕೆಲಸ ಮಾಡಬೇಕಿತ್ತು. ಈ ಅವಾಂತರಕ್ಕೆ ಮುಖ್ಯಮಂತ್ರಿಗಳು ಹಾಗೂ ಸರ್ಕಾರವೇ ಹೊಣೆ ಎಂದು ಆರೋಪಿಸಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ