ಬೆಳ್ಳಂಬೆಳಗ್ಗೆ ಎಸ್.ಡಿ.ಪಿ.ಐ. ನಾಯಕ ರಿಯಾಝ್ ಫರಂಗಿಪೇಟೆ ಮನೆಗೆ ಎನ್ ಐಎ ದಾಳಿ
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ಎನ್ ಐಎ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದು, ಇಂದು ಬೆಳ್ಳಂಬೆಳಗ್ಗೆ ಎಸ್.ಡಿ.ಪಿ.ಐ. ನಾಯಕ ರಿಯಾಝ್ ಫರಂಗಿಪೇಟೆ ಮನೆಗೆ ದಾಳಿ ನಡೆಸಿ, ಪರಿಶೀಲನೆ ನಡೆಸಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ( ಎನ್ ಐಎ) ಅಧಿಕಾರಿಗಳ ತಂಡ ಇಂದು ಬೆಳಗ್ಗೆ ಎಸ್.ಡಿ.ಪಿ.ಐ. ನಾಯಕ ರಿಯಾಝ್ ಫರಂಗಿಪೇಟೆ ಅವರ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿತು.
ಬೆಳ್ಳಂ ಬೆಳಗ್ಗೆ ಮನೆಗೆ ದಾಳಿ ನಡೆಸಿದ ಅಧಿಕಾರಿಗಳು ಪರಿಶೀಲನಾ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ಅಧಿಕಾರಿಗಳು ದಾಳಿ ನಡೆಸಿದ ಸುದ್ದಿ ತಿಳಿದು ಮನೆಯ ಎದುರು ಎಸ್.ಡಿ.ಪಿ.ಐ. ಪಕ್ಷದ ಕಾರ್ಯಕರ್ತರು ಜಮಾಯಿಸಿ ಅಧಿಕಾರಿಗಳ ನಡೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka