ರೈಲ್ವೆ ನಿಲ್ದಾಣದಲ್ಲಿ ಮಹಿಳೆಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ - Mahanayaka
10:13 AM Thursday 12 - December 2024

ರೈಲ್ವೆ ನಿಲ್ದಾಣದಲ್ಲಿ ಮಹಿಳೆಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ

uttarpradesh
09/09/2022

ಲಕ್ನೋ: ಉತ್ತರ ಪ್ರದೇಶದ ಗೋರಖ್‌ಪುರದ ರೈಲು ನಿಲ್ದಾಣದಲ್ಲಿ ಬುಧವಾರ ರಾತ್ರಿ 25 ವರ್ಷ ವಯಸ್ಸಿನ ಮಹಿಳೆಯೊಬ್ಬರನ್ನು ಅಪಹರಿಸಿದ ಮೂವರು ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ನಡೆದಿದೆ.

ಬುಧವಾರ ರಾತ್ರಿ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮಹಾರಾಜ್‌ಗಂಜ್ ಜಿಲ್ಲೆಯವರಾದ ಮಹಿಳೆ, ಧರ್ಮಶಾಲಾ ಬಜಾರ್ ಸೇತುವೆಯ ಬಳಿ ರೈಲ್ವೆ ನಿಲ್ದಾಣದ ಪ್ಲಾಟ್‌ಫಾರ್ಮ್ ನಂಬರ್ ಒಂದರ ಸಮೀಪ ವಾಸಿಸುತ್ತಿದ್ದರು ಎನ್ನಲಾಗಿದೆ.

ಮಹಿಳೆಯನ್ನು ಅಪಹರಿಸಿದ ಆರೋಪಿಗಳು ಸಾಮೂಹಿಕ ಅತ್ಯಾಚಾರ ನಡೆಸಿದ್ದು, ಮಹಿಳೆ ಕಿರುಚಿದಾಗ ಅಮಾನುಷವಾಗಿ ಥಳಿಸಿದ್ದಾರೆ  ಎಂದು ಮಹಿಳೆ ಘಟನೆಯ ಬಳಿಕ ಪೊಲೀಸರಿಗೆ ದೂರು ನೀಡಿದ್ದಾರೆ.

ಮಹಿಳೆಯ ದೂರಿನನ್ವಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಸಾಮೂಹಿಕ ಅತ್ಯಾಚಾರ ಪ್ರಕರಣ ದಾಖಲಿಸಿಕೊಂಡು ಅತ್ಯಾಚಾರಿಗಳ ಬಂಧನಕ್ಕಾಗಿ ಶೋಧ ನಡೆಸುತ್ತಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ