ರಸ್ತೆ ದಾಟುತ್ತಿದ್ದ ವೇಳೆ ಬೈಕ್ ಡಿಕ್ಕಿಯಾಗಿ ಮದ್ರಸಾದ ವಿದ್ಯಾರ್ಥಿನಿ ಸಾವು
10/09/2022
ಮದ್ರಸಾದಿಂದ ತರಗತಿ ಮುಗಿಸಿಕೊಂಡು ಮನೆಗೆ ಹೋಗಲು ರಸ್ತೆ ದಾಟುತ್ತಿದ್ದಾಗ ಬೈಕ್ ಢಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ಬಾಲಕಿ ಮೃತಪಟ್ಟಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕು ಅರಂಬೂರು ಸಮೀಪದ ಪಾಲಡ್ಕ ಎಂಬಲ್ಲಿ ನಡೆದಿದೆ.
ಪಾಲಡ್ಕ ನಿವಾಸಿ ರಶೀದ್ ಎಂಬವರ ಪುತ್ರಿ ಆಯಿಷಾ ರಿಫಾ (6 )ಮೃತಪಟ್ಟ ಬಾಲಕಿ. ಇಂದುಬೆಳಗ್ಗೆ ಮದರಸದಿಂದ ಮನೆಗೆ ಹಿಂತಿರುಗುತ್ತಿದ್ದ ವೇಳೆ ರಸ್ತೆ ದಾಟುತ್ತಿದ್ದಾಗ ಅರಂತೋಡು ಕಡೆಯಿಂದ ಸುಳ್ಯ ಕಡೆಗೆ ಬರುತ್ತಿದ್ದ ಬೈಕೊಂದು ಬಾಲಕಿಗೆ ಢಿಕ್ಕಿ ಹೊಡೆದಿದೆ.
ತಕ್ಷಣ ಬಾಲಕಿಯನ್ನು ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿತ್ತಾದರೂ ಬಾಲಕಿ ಮೃತಪಟ್ಟಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka