ಬಿಜೆಪಿ ಕಾರ್ಯಕರ್ತರನ್ನು ಸಮಾಧಾನ ಮಾಡಲು ಎನ್ ಐಎಯನ್ನು ಪಿಎಫ್ ಐನವರ ಮನೆಗೆ ಕಳಿಸಿದ್ದಾರೆ: ಎ.ಕೆ. ಅಶ್ರಫ್ ಆರೋಪ
ಪ್ರವೀಣ್ ನೆಟ್ಟಾರು ಹತ್ಯೆಯಿಂದ ಆಕ್ರೋಶಗೊಂಡಿದ್ದ ಹಿಂದೂ ಕಾರ್ಯಕರ್ತರನ್ನು ಸಮಾಧಾನ ಪಡಿಸಲು ಬಿಜೆಪಿ ಸರ್ಕಾರ ರಾಷ್ಟ್ರೀಯ ತನಿಖಾ ದಳವನ್ನು ಪಿಎಫ್ ಐನವರ ಮನೆಗೆ ಕಳಿಸಿದ್ದಾರೆ ಎಂದು ಪಿಎಫ್ ಐ ರಾಜ್ಯ ಕಾರ್ಯದರ್ಶಿ ಎ.ಕೆ. ಅಶ್ರಫ್ ಹೇಳಿದ್ದಾರೆ.
ದಕ್ಷಿಣ ಕನ್ನಡದ ಹಲವೆಡೆ ನಡೆದ ಎನ್ ಐಎ ದಾಳಿ ವಿರೋಧಿಸಿ ಯುಎಪಿಎ ಕಾಯ್ದೆ ವಿರೋಧಿ ಹೋರಾಟ ಸಮಿತಿಯವರು ಮಂಗಳೂರಿನ ಕ್ಲಾಕ್ ಟವರ್ ಬಳಿ ನಡೆಸಿದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.
ಆರ್ ಎಸ್ ಎಸ್ ಮತ್ತು ಬಿಜೆಪಿಯವರಿಗೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯನ್ನು ನಿಯಂತ್ರಿಸಲು ಸಾಧ್ಯವಾಗದ್ದಕ್ಕೆ ತನಿಖಾ ಸಂಸ್ಥೆಯಾದ ಎನ್ ಐಎ ಅನ್ನು ಪಿಎಫ್ ಐ ಮೇಲೆ ಛೂ ಬಿಟ್ಟಿದ್ದಾರೆ ಎಂದು ಆರೋಪಿಸಿದ್ದಾರೆ.
ಎನ್ ಐಎ ದಾಳಿ ಮೂಲಕ ಪಾಪ್ಯುಲರ್ ಫ್ರಂಟ್ ಇಂಡಿಯಾ ಸಂಘಟನೆಯನ್ನು ಹೆದರಿಸಲು ಸಾಧ್ಯವಿಲ್ಲ . ನಮ್ಮ ಪ್ರಾಣವನ್ನು ತೆಗೆಯಬಹುದು, ಆದರೆ ನಮ್ಮನ್ನು ಮಂಡಿಯೂರಿಸಲು ನಿಮಗೆ ಸಾಧ್ಯವಿಲ್ಲ ಎಂದು ಅಶ್ರಫ್ ಸವಾಲು ಹಾಕಿದರು.
ಪ್ರತಿಭಟನೆಯಲ್ಲಿ ಮಾತನಾಡಿದ ಮಹಿಳಾ ಹೋರಾಟಗಾರ್ತಿ ಶಾಹಿದಾ ತಸ್ಲೀಮ್ , ರಾಷ್ಟ್ರೀಯ ತನಿಖಾ ದಳ ಬಿಜೆಪಿ ಗುಲಾಮಗಿರಿ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಯುಎಪಿಎ ಕಾಯ್ದೆ ವಿರೋಧಿ ಹೋರಾಟ ಸಮಿತಿಯವರು ನಡೆಸಿದ ಪ್ರತಿಭಟನಾ ಸಭೆಯಲ್ಲಿ ಜಿಲ್ಲೆಯ ಸಂಘ ಸಂಸ್ಥೆಗಳ ಹಲವು ಮುಖಂಡರು ಹಾಗೂ ಕಾರ್ಯಕರ್ತರು ಭಾಗಿಯಾಗಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka