ಸಿಡಿಲಿಗೆ ಇಬ್ಬರು ಬಲಿ: ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

10/09/2022
ಯಾದಗಿರಿ: ಜಿಲ್ಲೆಯ ಸುರಪುರ ತಾಲೂಕಿನಲ್ಲಿ ಗುಡುಗು ಸಹಿತ ಮಳೆ ಸುರಿದಿದ್ದು, ಈ ವೇಳೆ ಸಿಡಿಲಿನ ಹೊಡೆತಕ್ಕೆ ಸಿಲುಕಿ ಇಬ್ಬರು ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ.
ತಾಲೂಕಿನ ಚಿಕ್ಕನಹಳ್ಳಿ ಗ್ರಾಮದ ನಂದಮ್ಮ ಗಂಡ ನಿಂಗಪ್ಪ ಸಂಗವಾರ ವಯಸ್ಸು (44) ಹಾಗೂ ದೇವತ್ಕಲ್ ಗ್ರಾಮದಲ್ಲಿ ರಾಜು ತಂದೆ ಮಲ್ಲಿಕಾರ್ಜುನ ವಯಸ್ಸು (33) ಇಬ್ಬರು ಮೃತಪಟ್ಟಿದ್ದಾರೆ.
ಮೃತ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದ್ದು, ಸುರಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka