ಅಡ್ರೆಸ್ ಕೇಳುವ ನೆಪದಲ್ಲಿ ಮಹಿಳೆಯ ಚಿನ್ನದ ಸರ ಕಿತ್ತು ಪರಾರಿಯಾದ ಕಳ್ಳರು!
11/09/2022
ಮೈಸೂರು: ಅಡ್ರೆಸ್ ಕೇಳುವ ನೆಪದಲ್ಲಿ ಕಳ್ಳರು ಮಹಿಳೆಯ ಸರ ಕದ್ದು ಪರಾರಿಯಾದ ಘಟನೆ ನಂಜನಗೂಡು ತಾಲೂಕಿನ ಕೋಣನೂರು ಗ್ರಾಮದಲ್ಲಿ ನಡೆದಿದೆ.
ಕೋಣನೂರು ಗ್ರಾಮದ ಕೂಸಮ್ಮ ಎಂಬವರ ಬಳಿಯಲ್ಲಿ ಅಡ್ರೆಸ್ ಕೇಳುವ ನೆಪದಲ್ಲಿ ಮಾತನಾಡಿಸಿ, ಏಕಾಏಕಿ 20 ಗ್ರಾಂ ಚಿನ್ನದ ಸರವನ್ನು ಕಿತ್ತು ಕಳ್ಳರು ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ.
ಘಟನೆ ಸಂಬಂಧ ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಇನ್ನೂ ಕಳ್ಳರ ಬಂಧನಕ್ಕಾಗಿ ಪೊಲೀಸರು ಶೋಧ ನಡೆಸುತ್ತಿದ್ದು, ಸಿಸಿ ಕ್ಯಾಮರದಲ್ಲಿ ಕಳ್ಳರ ಚಲನವಲನ ಸೆರೆಯಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka